ಕೂಡ್ಲಿಗಿ ಡಿವೈಎಸ್‌ಪಿ ಅನುಪಮಾ ಶೆಣೈ ರಾಜೀನಾಮೆ ಪ್ರಕರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ನಾಯಕರ ಕೈವಾಡವಿದೆ ಎಂದು ಗುಪ್ತಚರ ಇಲಾಖೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾಹಿತಿ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಬಳ್ಳಾರಿ ಉಸ್ತುವಾರಿ ಸಚಿವರ ಕಿರುಕುಳದಿಂದ ಬೇಸತ್ತು ಕೂಡ್ಲಿಗಿ ಡಿವೈಎಸ್‌ಪಿ ಅನುಪಮಾ ಶೆಣೈ ರಾಜೀನಾಮೆ ನೀಡಿದ್ದಾರೆ ಎಂದು ಕಳೆದ ಎರಡು ಮೂರು ದಿನಗಳಿಂದ ಸುದ್ದಿಯಾಗಿತ್ತು. ಆದರೆ, ಇದೀಗ ಅನುಪಮಾ ಶೆಣೈ ರಾಜೀನಾಮೆ ಹಿಂದೆ ಬಿಜೆಪಿ ಪಕ್ಷದ ಹಿರಿಯ ಮಹಿಳಾ ರಾಜಕಾರಣಿ ಸೇರಿದಂತೆ ಆರ್‌ಎಸ್‌ಎಸ್ ಮತ್ತು ಬಿಜೆಪಿಯವರ ಕೈವಾಡವಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.
ಮುಂದಿನ ಚುನಾವಣೆಯಲ್ಲಿ ಉಡುಪಿ ಕ್ಷೇತ್ರದಿಂದ ಡಿವೈಎಸ್‌ಪಿ ಅನುಪಮಾ ಶೆಣೈ ಅವರಿಗೆ ಬಿಜೆಪಿ ಟಿಕೆಟ್ ನೀಡಲಿದೆ ಎಂದು ಮಾಹಿತಿ ನೀಡಿರುವ ಗುಪ್ತಚರ ಇಲಾಖೆ, ಬಳ್ಳಾರಿ ಉಸ್ತುವಾರಿ ಸಚಿವ ಪರಮೇಶ್ವರ್ ನಾಯ್ಕ ಅವರ ತೇಜೊವಧೆ ಮಾಡಲು ಅನುಪಮಾ ಶೆಣೈ ಅವರ ಬಳಿ ದೊಡ್ಡ ಮಟ್ಟದ ದಾಖಲೆಗಳಿವೆ ಎಂದು ಮುಖ್ಯಮಂತ್ರಿಯವರಿಗೆ ಮಾಹಿತಿ ನೀಡಿದೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.