ಕೂಡ್ಲಿಗಿ ಡಿವೈಎಸ್‌ಪಿ ಅನುಪಮಾ ಶೆಣೈ ರಾಜೀನಾಮೆ ಹಿಂದೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಕೈವಾಡವಿದೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಗಂಭೀರವಾಗಿ ಆರೋಪಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್, ಅನುಪಮಾ ಶೆಣೈ ಅವರ ರಾಜೀನಾಮೆ ಪ್ರಕರಣದಲ್ಲಿ ಸಂವಹನದ ಕೂರತೆ ಉಂಟಾಗಿದ್ದರಿಂದ ಸಮಸ್ಯೆ ತಾರಕಕ್ಕೇರಿತ್ತು. ರಾಜ್ಯ ಸರಕಾರದೊಂದಿಗೆ ಚರ್ಚೆ ನಡೆಸದೆ ಅವರು ರಾಜೀನಾಮೆ ತೀರ್ಮಾನ ಕೈಕೊಂಡಿದ್ದಾರೆ ಎಂದು ಹೇಳಿದರು.
ಅನುಪಮಾ ಶೆಣೈ ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಯಾರಾದರೂ ಅಡ್ಡಿಯಾಗುತ್ತಿದ್ದಾರೆ ಎಂದು ಭಾವಿಸಿದ್ದಲ್ಲಿ ರಾಜ್ಯ ಸರಕಾರದ ಗಮನಕ್ಕೆ ತಂದು, ಈ ಕುರಿತು ಚರ್ಚೆ ನಡೆಸಬೇಕಿತ್ತು. ಅವರ ರಾಜೀನಾಮೆ ಹಿಂದೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಕೈವಾಡವಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.
ಅನುಪಮಾ ಶೆಣೈ ರಾಜೀನಾಮೆ ಹಿಂಪಡೆಯುವಂತೆ ರಾಜ್ಯ ಸರಕಾರ ಮತ್ತು ಹಿರಿಯ ಅಧಿಕಾರಿಗಳು ಮನವೊಲಿಸಲು ಮುಂದಾಗಿದ್ದರು. ಆದರೂ, ಅವರು ಪ್ರತಿಕ್ರಿಯೆ ನೀಡದ ಕಾರಣ ಸರಕಾರ ಅವರ ರಾಜೀನಾಮೆಯನ್ನು ಅಂಗೀಕರಿಸಿದೆ ಎಂದು ಸ್ವಷ್ಟಪಡಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ