ಬೆಳಗಾವಿ ಕಾಂಗ್ರೆಸ್ ಫೈಟ್: ಲಕ್ಷ್ಮೀ ಹೆಬ್ಬಾಳ್ಕರ್ ಡಿಮ್ಯಾಂಡ್ ಏನು ಗೊತ್ತಾ?

ಶುಕ್ರವಾರ, 7 ಸೆಪ್ಟಂಬರ್ 2018 (10:15 IST)
ಬೆಳಗಾವಿ: ಬೆಳಗಾವಿ ಕಾಂಗ್ರೆಸ್ ನಾಯಕರಾದ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಜಾರಕಿಹೊಳಿ ಸಹೋದರರ ನಡುವಿನ ಫೈಟ್ ಗೆ ಹೊಸ ಟ್ವಿಸ್ಟ್ ಸಿಕ್ಕಿದೆ.

ಇಂದು ಪಿಎಲ್ ಡಿ ಬ್ಯಾಂಕ್ ಚುನಾವಣೆ ನಡೆಯುತ್ತಿದ್ದು ಇಬ್ಬರು ನಾಯಕರಿಗೆ ಪ್ರತಿಷ್ಠೆಯ ಕಣವಾಗಿತ್ತು. ಇದು ರಾಜ್ಯ ರಾಜಕೀಯದ ಮೇಲೆ ಪ್ರಭಾವ ಬೀರಲಿತ್ತು.

ಈ ಹಿನ್ನಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಲಕ್ಷ್ಮೀ ಹೆಬ್ಬಾಳ್ಕರ್ ರನ್ನು ಭೇಟಿಯಾಗಿ ಸಂಧಾನ ನಡೆಸುವ ಪ್ರಯತ್ನ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪಿಎಎಲ್ ಡಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ ನಡೆಸುವಂತೆ ಮತ್ತು ಮುಂಬರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ತಮಗೆ ಸಚಿವ ಸ್ಥಾನ ನೀಡಬೇಕೆಂದು ಲಕ್ಷ್ಮೀ ಹೆಬ್ಬಾಳ್ಕರ್ ಬೇಡಿಕೆ ಇಟ್ಟಿದ್ದಾರೆಂದು ಸುದ್ದಿ ಹಬ್ಬಿದೆ. ಆದರೆ ಮಾತುಕತೆಯ ಬಳಿಕ ಹೊರ ಬಂದ ಈಶ್ವರ ಖಂಡ್ರೆ ಮಾತುಕತೆ ಫಲಪ್ರದವಾಗಿದೆ ಎಂದಷ್ಟೇ ಹೇಳಿ ಹೊರಬಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಬಿಜೆಪಿ ಶಾಸಕನ ನಾಲಿಗೆ ಕತ್ತರಿಸಿದರೆ 5 ಲಕ್ಷ ಬಹುಮಾನ ಕೊಡುತ್ತೇನೆ ಎಂದ ಕಾಂಗ್ರೆಸ್ ನಾಯಕ