Select Your Language

Notifications

webdunia
webdunia
webdunia
webdunia

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: 7 ವರ್ಷ ಶಿಕ್ಷೆಗೆ ಗುರಿಯಾಗಿದ್ದ ಶಾಸಕ ಸತೀಶ್‌ ಸೈಲ್ ನಾಳೆಯೇ ಬಿಡುಗಡೆ ಸಾಧ್ಯತೆ

MLA Sathish Sail, Belekeri Iron Ore Theft Case, Karnataka High Court,

Sampriya

ಬೆಂಗಳೂರು , ಬುಧವಾರ, 13 ನವೆಂಬರ್ 2024 (18:04 IST)
Photo Courtesy X
ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ 7 ವರ್ಷ ಜೈಲಿ ಶಿಕ್ಷೆಗೆ ಗುರಿಯಾಗಿದ್ದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ಹೈಕೋರ್ಟ್‌ ವಿಶೇಷ ನ್ಯಾಯಾಲಯ ನೀಡಿದ್ದ ಶಿಕ್ಷೆಯನ್ನು ಅಮಾನತ್ತಿನಲ್ಲಿಡಲು ಆದೇಶಿಸಿದೆ. ಇದರಿಂದ ಶಾಸಕ ಸತೀಶ್ ಸೈಲ್‌ಗೆ ಬಿಗ್‌ ರಿಲೀಫ್ ಸಿಕ್ಕಿದೆ.

ಪ್ರಕರಣ ಸಂಬಂಧ ವಿಶೇಷ ಕೋರ್ಟ್ ವಿಧಿಸಿದ್ದ ಜೈಲು ಶಿಕ್ಷೆ ಪ್ರಶ್ನಿಸಿ ಸತೀಶ್ ಸೈಲ್ ಹಾಗೂ ಇತರ ಆರೋಪಿಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್​ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಶಿಕ್ಷೆಯನ್ನು ಅಮಾನತ್ತಿನಲ್ಲಿಡಲು ಆದೇಶಿಸಿದೆ.

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ಕೋರ್ಟ್​, ಆರೋಪಿಗಳಿಗೆ ಶಿಕ್ಷೆ ಹಾಗೂ ದಂಡ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಆರೋಪಿಗಳ ಪರ ವಕೀಲರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. ಇದೀಗ ಆದೇಶ ಹೊರಡಿಸಿದ ಕೋರ್ಟ್‌ ಶಿಕ್ಷೆಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.

ಆರು ವಾರದಲ್ಲಿ ದಂಡದ ಮೊತ್ತದ ಶೇ. 25ರಷ್ಟನ್ನು ವಿಚಾರಣಾಧೀನ ನ್ಯಾಯಾಲಯದಲ್ಲಿ ಠೇವಣಿ ಇಡಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಅಲ್ಲದೆ, ದಂಡದ ಮೊತ್ತವನ್ನು ವಿಚಾರಣಾಧೀನ ನ್ಯಾಯಾಲಯದಲ್ಲಿ ಠೇವಣಿ ಇಡುವ ಷರತ್ತಿಗೆ ಒಳಪಟ್ಟು ವಿಶೇಷ ನ್ಯಾಯಾಲಯ ವಿಧಿಸಿರುವ ಶಿಕ್ಷೆಯನ್ನು ಹೈಕೋರ್ಟ್‌ ಅಮಾನತುಗೊಳಿಸಿದೆ.

ಶಿಕ್ಷೆ ಅಮಾನತುಗೊಳಿಸಿದ ಹಿನ್ನೆಲೆ ನಾಳೆಯೇ ಸತೀಶ್ ಸೈಲ್‌ ಅವರು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಓದಿದ ಶಾಲೆಯನ್ನೇ ಉದ್ದಾರ ಮಾಡಿಲ್ಲ: ಬಸವರಾಜ ಬೊಮ್ಮಾಯಿ ವೋಟ್ ಹಾಕಿದ ಶಾಲೆಯ ದುಸ್ಥಿತಿಗೆ ವ್ಯಂಗ್ಯ