Select Your Language

Notifications

webdunia
webdunia
webdunia
webdunia

ಬೆಳಗಾವಿ 31 ಕೃಷ್ಣ ಮೃಗಗಳ ಸಾವು ಪ್ರಕರ, ಕಾರಣ ಬಿಚ್ಚುಟ್ಟ ಈಶ್ವರ ಖಂಡ್ರೆ

Eshwar khandre
ಬೆಳಗಾವಿ: ರಾಜ್ಯದಲ್ಲಿ ಸುದ್ದಿಗೆ ಗ್ರಾಸವಾಗಿದ್ದ ಬೆಳಗಾವಿ ಮೃಗಾಲಯದ 31 ಕೃಷ್ಣಮೃಗಗಳ ಸಾವು ಪ್ರಕರಣ ಸಂಬಂಧ ಸಚಿವ ಈಶ್ವರ ಖಂಡ್ರೆ ಅವರು ಪ್ರತಿಕ್ರಿಯಿಸಿದ್ದಾರೆ. 

ಬ್ಯಾಕ್ಟಿರೀಯಾ ಸೋಂಕು ಗಳಲೆ ರೋಗ (ಹೆಮರೇಜಿಕ್ ಸೆಪ್ಟಿ ಸೀಮಿಯಾ)ದಿಂದ ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣ ಮೃಗಗಳು ಸಾವನ್ನಪ್ಪಿದೆ ಎಂದು ಮಾಹಿತಿ ನೀಡಿದರು. 

ವಿಧಾನಪರಿಷತ್ತಿನಲ್ಲಿಂದು ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಅವರು, ಚಿಗುರು ತಿನ್ನುವ ಪ್ರಾಣಿಗಳಲ್ಲಿ ಸಾಮಾನ್ಯವಾಗಿ ಈ ಕಾಯಿಲೆ ಕಾಣಿಸಿಕೊಳ್ಳುತ್ತದೆ.

ಹೊರ ನೋಟಕ್ಕೆ ಸೋಂಕಿನ ಲಕ್ಷಣವೂ ಕಾಣುವುದಿಲ್ಲ. ಈ ಸೋಂಕು ಬಂದ 6 ರಿಂದ 24 ಗಂಟೆಗಳಲ್ಲಿ ಅಥವಾ 8ರಿಂದ 24 ಗಂಟೆಗಳಲ್ಲಿ ಸಾವು ಸಂಭವಿಸುತ್ತದೆ ಎಂದು ವೈದ್ಯರು ಹೇಳುತ್ತಾರೆ. ಸೋಂಕು ತಗುಲಿದ ಕೆಲವೇ ಗಂಟೆಗಳಲ್ಲಿ ಸಾವು ಸಂಭವಿಸುವ ಕಾರಣ ಕೃಷ್ಣಮೃಗಗಳ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. 

ಕಿರು ಮೃಗಾಲಯದಲ್ಲಿ ನ.13 ರಿಂದ 17 ರವರೆಗೆ ಒಟ್ಟು 31 ಕೃಷ್ಣಮೃಗಗಳು ಸಾವಿಗೀಡಾಗಿವೆ. ಮೃಗಾಲಯದ ವೈದ್ಯರು, ಪಶು ಸಂಗೋಪನಾ ಇಲಾಖೆಯ ಸ್ಥಳೀಯ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿ, ಪಶುವೈದ್ಯಕೀಯ ಜೈವಿಕ ಸಂಸ್ಥೆಗೆ ಮಾದರಿ ಕಳಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯಗೆ ಬಂತು ಸುಪ್ರೀಂ ನೋಟಿಸ್, ಯಾವಾ ಪ್ರಕರಣದಲ್ಲಿ ಗೊತ್ತಾ