Select Your Language

Notifications

webdunia
webdunia
webdunia
webdunia

ಬೆಳಗಾವಿ: ಜಿಲ್ಲಾಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾವು

Belgavi District Hospital, Maternal Case,  Maternal Vaishali Case

Sampriya

ಬೆಳಗಾವಿ , ಭಾನುವಾರ, 22 ಡಿಸೆಂಬರ್ 2024 (16:47 IST)
ಬೆಳಗಾವಿ: ರಾಜ್ಯದಲ್ಲಿ ಬಾಣಂತಿಯರ ಸಾವು ಪ್ರಕರಣ ಸಂಬಂಧ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಬಾಣಂತಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತರನ್ನು ಹುಕ್ಕೇರಿ ತಾಲೂಕಿನ ಗೌಡವಾಡ ಗ್ರಾಮದ ವೈಶಾಲಿ ಕೊಡಬಾಗಿ ಎಂದು ಗುರುತಿಸಲಾಗಿದೆ. ಅವರು ಹೆರಿಗೆಗಾಗಿ ಬೆಳಗಾವಿ ಬಿಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದರು. ಸಿಸೇರಿಯನ್ ಮೂಲಕ‌ ಹೆಣ್ಣು ಮಗುವಿಗೆ ಜನ್ಮ ನೀಡಿದ ವೈಶಾಲಿಗೆ ಬೆಳಗ್ಗೆ ಎದೆನೋವು ಕಾಣಿಸಿಕೊಂಡಿತ್ತು.

ತಕ್ಷಣ ಬಾಣಂತಿ ವೈಶಾಲಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಿತ್ತಾದರೂ, ಚಿಕಿತ್ಸೆ ಫಲಿಸದೇ ಮರಣ ಹೊಂದಿದ್ದಾರೆ ಎಂದು ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ. ಆದರೆ ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಿಲ್ಲ ಎಂದು ವೈಶಾಲಿ ಪತಿ ಈರಣ್ಣ ಗಂಭೀರ ಆರೋಪ ಮಾಡಿದ್ದಾರೆ.

ಈ ಘಟನೆಯಿಂದ ಆಸ್ಪತ್ರೆಯಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಸ್ಥಳಕ್ಕೆ ಎಪಿಎಂಸಿ ಭೇಟಿ ನೀಡಿದ್ದಾರೆ.

ಕಳೆದ ಆರು ತಿಂಗಳಲ್ಲಿ ಜಿಲ್ಲೆಯಲ್ಲಿ 29 ಬಾಣಂತಿಯರು ಸಾವಿಗೀಡಾಗಿದ್ದಾರೆಂದು ವರದಿಯಾಗಿತ್ತು. ಈಗ ಮತ್ತೊಂದು ಸಾವು ಪ್ರಕರಣ ನಡೆದಿದ್ದು, ಮತ್ತಷ್ಟು ಗೊಂದಲಕ್ಕೆ ಕಾರಣವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

18ವರ್ಷ ಮೇಲ್ಪಟ್ಟ ಹೆಣ್ಮಕ್ಳಿಗೆ ಮಾಸಿಕ ₹1000: ನಾಳೆಯಿಂದ ನೋಂದಣಿ ಶುರು ಎಂದ ಕೇಜ್ರಿವಾಲ್