Daily Horoscope
✕

ಬೆಳಗಾವಿ ಪರಿಷತ್ ಫೈಟ್!

Webdunia
ಬುಧವಾರ, 17 ನವೆಂಬರ್ 2021 (08:15 IST)
ಬೆಳಗಾವಿ : ಬೆಳಗಾವಿ ಸ್ಥಳೀಯ ಸಂಸ್ಥೆಯಿಂದ ಡಿಸೆಂಬರ್ 10ಕ್ಕೆ  ಪರಿಷತ್ ಎರಡು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಇದು ಬೆಳಗಾವಿ ಜಿಲ್ಲೆಯಲ್ಲಿ ಜಿದ್ದಾಜಿದ್ದಿನ ಹೋರಾಟಕ್ಕೆ ಸಾಕ್ಷಿಯಾಗಲಿದೆ. ಕಾಂಗ್ರೆಸ್, ಬಿಜೆಪಿ ಪಕ್ಷ ಇನ್ನೂ ತಮ್ಮ ಅಧಿಕೃತ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಆದರೆ ಕಾಂಗ್ರೆಸ್ ನಿಂದ ಚನ್ನರಾಜ್ ಹಟ್ಟಿಹೊಳಿ ಹಾಗೂ ಬಿಜೆಪಿಯಿಂದ ಮಹಾಂತೇಶ ಕವಟಗಿಮಠ ಕಣಕ್ಕೆ ಇಳಿಯೋದು ಬಹುತೇಕ ಖಚಿತವಾಗಿದೆ. ಇಬ್ಬರಿಗೆ ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ಕಣಕ್ಕೆ ಇಳಿಯುತ್ತಿರೋದು ದೊಡ್ಡ ತಲೆನೋವು ಆಗಿದೆ.
ಫಲಿತಾಂಶದ ಮೇಲೆ ಪರಿಣಾಮ ಬೀರಲಿದ್ದು, ಇಬ್ಬರು ಆಕಾಂಕ್ಷಿಗಳನ್ನು ಗೊಂದಲ ಸೃಷ್ಟಿಯಾಗಿದೆ. ಮೂರು ಜನ ಜಾರಕಿಹೊಳಿ ಸಹೋದರರು ಈಗಾಗಲೇ ವಿಧಾನಸಭೆ ಸದಸ್ಯರಾಗಿ ಅನೇಕ ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಈಗ ಮತ್ತೊಬ್ಬ ಸಹೋದರ ಪರಿಷತ್ ಮೂಲಕ ರಾಜಕೀಯ ಪ್ರವೇಶಕ್ಕೆ ತಾಲೀಮು ಆರಂಭಿಸಿದ್ದಾರೆ. ಈ ಚುನಾವಣೆ ಜಾರಕಿಹೊಳಿ ಸಹೋದರರು ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಮತ್ತೊಂದು ಹೋರಾಟಕ್ಕೆ ಸಾಕ್ಷಿ ಆಗಲಿದೆ.
ಪಿ ಎಲ್ ಡಿ ಬ್ಯಾಂಕ್ ಬಳಿಕ ಬೆಳಗಾವಿ ಪರಿಷತ್ ಎರಡು ಸ್ಥಾನಗಳ ಚುನಾವಣೆ ಜಿದ್ದಾಜಿದ್ದಿನ ಹೋರಾಟಕ್ಕೆ ವೇದಿಕೆ ಆಗಲಿದೆ. ಜಾರಕಿಹೊಳಿ ಹಾಗೂ ಹೆಬ್ಬಾಳ್ಕರ್ ನಡುವೆ ಹೋರಾಟ ನಡೆಯಲಿದೆ. ಕುಟುಂಬ ರಾಜಕೀಯ ವಿಸ್ತರಣೆಗೆ ಪರಿಷತ್ ಚುನಾವಣೆ ವೇದಿಕೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲ್ಲೇ ಡ್ರಾ ಅಲ್ಲೇ ಬಹುಮಾನ.. ಉತ್ತರ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿಯ ಚುಡಾಯಿಸಿದ ದುರುಳ: ಪೊಲೀಸರು ಏನು ಮಾಡಿದ್ರು ನೋಡಿ Video

ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಕಾಂಗ್ರೆಸ್ ಪಕ್ಷ: ಬಿ.ಶ್ರೀರಾಮುಲು

ರಾಜ್ಯದ ಜನತೆಗೆ ಮತ್ತೊಂದು ಬರೆ: ಸರ್ಕಾರಿ ಬಸ್ ಟಿಕೆಟ್ ದರ ಹೆಚ್ಚಳ, ಸಂಪೂರ್ಣ ವಿವರ ಇಲ್ಲಿದೆ

ಚಿನ್ನ ಮತ್ತು ಬೆಳ್ಳಿ ದರ ಏರಿಕೆ: ಕರ್ನಾಟಕ ಹಾಗೂ ಬೆಂಗಳೂರಿನ ಇಂದಿನ ಮಾರುಕಟ್ಟೆ ವಿವರ

ಸಾಸರ್ ಗಿರ್ ಅಭಯಾರಣ್ಯದಲ್ಲಿ ಊಹಿಸಲಾರದ ಘಟನೆ… ಬೇಟೆಯಾಡಿದ ಜಿಂಕೆಗೆ ಸಿಂಹಿಣಿ ಪ್ರಾಣಭಿಕ್ಷೆ: ಶಾಕಿಂಗ್ Video

ಮುಂದಿನ ಸುದ್ದಿ
Show comments