Select Your Language

Notifications

webdunia
webdunia
webdunia
webdunia

ಬೆಳಗಾವಿ ಗಲಭೆ:27 ಜನರಿಗೆ ನ್ಯಾಯಾಂಗ ಬಂಧನ

ಬೆಳಗಾವಿ ಗಲಭೆ:27 ಜನರಿಗೆ ನ್ಯಾಯಾಂಗ ಬಂಧನ
belagavi , ಶನಿವಾರ, 18 ಡಿಸೆಂಬರ್ 2021 (20:54 IST)
ಬೆಳಗಾವಿ :-ನಗರದಲ್ಲಿ ಶುಕ್ರವಾರ ರಾತ್ರಿ ನಡೆಸಿದ ಗಲಭೆಗೆ ಸಂಬಂಧಿಸಿ ನ್ಯಾಯಾಲಯವು 27 ಜನರಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಅವರನ್ನು ಹಿಂಡಲಗಾ ಜೈಲಿಗೆ ಕಳಿಸಲಾಗಿದೆ.
ಬೆಂಗಳೂರಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಲಾಗಿತ್ತು.
ನಂತರ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನಕ್ಕೆ ಆಗಮಿಸಿದ್ದ ವಿವಿಧ ಸರ್ಕಾರಿ ವಾಹನಗಳು ಮತ್ತು ಪೊಲೀಸ್‌ ವಾಹನಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ 20 ಕ್ಕೂ ಹೆಚ್ಚು ವಾಹನಗಳ ಮೇಲೆ ಕಲ್ಲು ತೂರಲಾಗಿತ್ತು. ಕೆಲ ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ ತಡರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು 27 ಜನರನ್ನು ಬಂಧಿಸಿ ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮುಡಾ ಅಧಿಕಾರಿಗಳಿಂದ ಅನಧಿಕೃತವಾಗಿ ನಿರ್ಮಿಸಿದ್ದ ಶೆಡ್‌ಗಳ ತೆರವು