ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

Sampriya
ಭಾನುವಾರ, 7 ಡಿಸೆಂಬರ್ 2025 (16:19 IST)
Photo Credit X
ಬೆಳಗಾವಿ: ನಾಳೆಯಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಈ  ಹಿನ್ನೆಲೆ ಬೆಳಗಾವಿ ಸುವರ್ಣಸೌಧದ ಸುತ್ತಾ ಬಿಗಿ ಬಂದೋಬಸ್ತ್‌ನ್ನು ಕೈಗೊಳ್ಳಲಾಗಿದೆ. 

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು, ಶಾಸಕರು ಸೇರಿದಂತೆ ಸಚಿವಾಲಯದ ಅಧಿಕಾರಿಗಳು, ಸಿಬ್ಬಂದಿಗೆ ಊಟ, ವಸತಿ ವ್ಯವಸ್ಥೆ ಮಾಡಲಾಗಿದೆ. 
ಇನ್ನೂ ಜಿಲ್ಲಾಡಳಿತದಿಂದ ಈಗಾಗಲೇ 3 ಸಾವಿರ ರೂಮ್ ಬುಕ್ ಆಗಿದ್ದು, ಸಿಎಂ ಮತ್ತು ಡಿಸಿಎಂಗೆ ಅತಿಥಿ ಗೃಹದಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ. 


ಯಾವುದೇ ಅಹಿತಕರ ಘಟನೆ ನಡೆಯದಂತೆ ಬೆಳಗಾವಿ ನಗರದಲ್ಲಿ ಹೆಚ್ಚುವರಿ ಭದ್ರತೆ ನಿಯೋಜನೆ ಮಾಡಲಾಗಿದೆ. ದೆಹಲಿ ಕೆಂಪು ಕೋಟೆ ಬಳಿ ಕಾರು ಸ್ಫೋಟ ಪ್ರಕರಣ ಬಳಿಕ ಎಚ್ಚೆತ್ತುಕೊಳ್ಳಲಾಗಿದ್ದು, ಅಧಿವೇಶನದ ವೇಳೆ ನಿಗಾ ವಹಿಸುವಂತೆ ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ನೀಡಿರುವ ಕಾರಣ ಬೆಳಗಾವಿ ಸುವರ್ಣಸೌಧದ ಸುತ್ತಮುತ್ತ ಹೈಅಲರ್ಟ್ ಘೋಷಣೆ ಮಾಡಲಾಗಿದೆ.

ಈ ಹಿನ್ನೆಲೆ ಬೆಳಗಾವಿ ನಗರದಲ್ಲಿ ಹೆಚ್ಚುವರಿಯಾಗಿ 6 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ. ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ನೇತೃತ್ವದಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದೆ. 6 ಎಸ್ಪಿ ದರ್ಜೆಯ ಪೊಲೀಸ್‌ ಅಧಿಕಾರಿಗಳು, 146 ಹಿರಿಯ ಪೊಲೀಸ್ ಅಧಿಕಾರಿಗಳು, 3,820 ಪೊಲೀಸ್ ಸಿಬ್ಬಂದಿ, 500 ಹೋಂ ಗಾರ್ಡ್ಸ್, 8 ಕ್ಷಿಪ್ರ ಕಾರ್ಯಪಡೆ, 10 ಡಿಎಆರ್ ತುಕಡಿ, 35 ಕೆಎಸ್‌ಆರ್‌ಪಿ ತುಕಡಿ, 1 ಬಿಡಿಡಿಎಸ್ ತಂಡ, 1 ಗರುಡಾ ಫೋರ್ಸ್, 16 ವಿಧ್ವಂಸಕ ಕೃತ್ಯ ತಪಾಸಣೆ ತಂಡಗಳು ಭದ್ರತೆಗಾಗಿ ನಿಯೋಜನೆಗೊಂಡಿವೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಗೋವಾ ಕ್ಲಬ್ ದುರಂತ, ಸಮಗ್ರ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಯಾರು ಬೇಕಾದರೂ ಮಸೀದಿ ಕಟ್ಟಬಹುದು, ಆದರೆ ದೇಶದ ವಾತಾವರಣ ಹಾಳು ಮಾಡುವ ಹಕ್ಕು ಯಾರಿಗೂ ಇಲ್ಲ

ರಾಜಧಾನಿಯಲ್ಲಿ ಇನ್ನೆರಡು ದಿನ ಮೈಕೊರೆಯುವ ಚಳಿ: ಕರಾವಳಿಯಲ್ಲಿ ಒಣಹವೆ ಮುಂದುವರಿಕೆ

ಸುವರ್ಣ ವಿಧಾನಸೌಧಕ್ಕೆ 9ರಂದು ರೈತರೊಂದಿಗೆ ಬಿಜೆಪಿ ಮುತ್ತಿಗೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದೇನು

ಮುಂದಿನ ಸುದ್ದಿ
Show comments