ಬೆಂಗಳೂರು: ಉತ್ತರ ಕರ್ನಾಟಕದ ಸಮಸ್ಯೆಗಳನ್ನು ಚರ್ಚಿಸಲು ಬೆಳಗಾವಿ ಅಧಿವೇಶನದಲ್ಲಿ ಹೆಚ್ಚು ಅವಕಾಶ ಕೊಡೋದಾಗಿ ಸ್ಪೀಕರ್ ಯು.ಟಿ.ಖಾದರ್ ಹೇಳಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಇದೀಗ ಬೆಳಗಾವಿ ಅಧಿವೇಶನಕ್ಕೆ ಸಂಪೂರ್ಣ ತಯಾರಿ ನಡೆಸುತ್ತಿದ್ದು ಬೆಳಗಾವಿಯಲ್ಲಿ ಈಗಾಗಲೇ ಅಧಿಕಾರಿಗಳ ಜೊತೆ ಸಭೆ ಮಾಡಿದ್ದೇವೆ. ಇನ್ನೂ ಅಧಿವೇಶನಕ್ಕೆ ಬರುವ ಯಾರಿಗೂ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಸರ್ಕಾರ 31 ಬಿಲ್ ತರ್ತಿದ್ದು, ಉತ್ತರ ಕರ್ನಾಟಕ ಚರ್ಚೆಗೆ ಅವಕಾಶ ತಡೆಯುತ್ತಿದೆ ಅಂತ ಬಿಜೆಪಿಯವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು ನಿಯಮದ ಪ್ರಕಾರ ಬಿಲ್ ಕೂಡ ಬರಲಿದೆ. ಬಿಲ್ ಬಗ್ಗೆಯೂ ಚರ್ಚೆ ನಡೆಸುತ್ತೇವೆ.