Select Your Language

Notifications

webdunia
webdunia
webdunia
webdunia

Belgavi: ಈ ಗ್ಯಾಂಗ್ ರೇಪ್‌ ಕರ್ನಾಟಕದಲ್ಲಿ ನಡೆದಿದೆಯಾ ಎಂದಾಗ ಅಚ್ಚರಿಯಾಗುತ್ತದೆ

ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣ

Sampriya

ಬೆಳಗಾವಿ , ಭಾನುವಾರ, 1 ಜೂನ್ 2025 (17:59 IST)
Photo Credit X
ಬೆಳಗಾವಿ: 15 ವರ್ಷದ ಬಾಲಕಿ ಮೇಲೆ ನಡೆದ ಗ್ಯಾಂಗ್ ರೇಪ್ ಸಂಬಂದ ಮೂವರು ಆರೋಪಿಗಳನ್ನು ಬಂಧಿಸಿದ್ದು, ಕಾನೂನು ಒಳಪಟ್ಟ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಪರಾರಿಯಾದ ಮತ್ತೊಬ್ಬ ಆರೋಪಿ ಬಂಧನಕ್ಕೆ ಜಾಲ ಬೀಸಿದ್ದೇವೆ ಎಂದು ನಗರ ಪೊಲೀಸ್‌ ಕಮಿಷನರ್‌ ಭೂಷಣ್‌ ಗುಲಾಬರಾವ್‌ ಬೊರಸೆ ಹೇಳಿದರು.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಎಪಿಎಂಸಿ ಠಾಣೆಯಲ್ಲಿ 6 ಮಂದಿ ವಿರುದ್ಧ ಶನಿವಾರ ಎಫ್‌ಐಆರ್‌ ದಾಖಲಾಗಿತ್ತು. ಪ್ರಕರಣ ದಾಖಲಾದ 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಸಂತ್ರಸ್ತೆ ಮತ್ತು ಆರೋಪಿಗಳು ಬೆಳಗಾವಿ ಜಿಲ್ಲೆಯವರೇ ಆಗಿದ್ದಾರೆ’ ಎಂದರು.

ಪ್ರಕರಣ ಹಿನ್ನೆಲೆ: ಬಾಲಕಿಯನ್ನು ಪರಿಚಯಿಸಿಕೊಂಡ ಒಬ್ಬ, ಆಕೆಯ ಜತೆ ಸ್ನೇಹವನ್ನು ಬೆಳೆಸುತ್ತಾನೆ.  ಬಳಿಕ ಆತ ಮತ್ತು ಸ್ನೇಹಿತರು 2024ರ ಡಿಸೆಂಬರ್‌ನಲ್ಲಿ ಪುಸಲಾಯಿಸಿಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾರೆ. ಅತ್ಯಾಚಾರದ ದೃಶ್ಯವನ್ನು ಆರೋಪಿಗಳು ವಿಡಿಯೊ ರೆಕಾರ್ಡ್ ಮಾಡಿದ್ದಾರೆ. ಅದನ್ನೇ ತೋರಿಸಿ ಬ್ಲ್ಯಾಕ್‌ಮೇಲ್‌ ಮಾಡಿ, 2025ರ ಜನವರಿಯಲ್ಲಿ ಮತ್ತೆ ಮೂವರು ಅತ್ಯಾಚಾರ ಮಾಡಿದ್ದಾರೆ. ಬೇರೆ ಬೇರೆ ಸ್ಥಳಗಳಲ್ಲಿ ಅತ್ಯಾಚಾರ ಮಾಡಲಾಗಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

‘ಬೆಳಗಾವಿ ತಾಲ್ಲೂಕಿನ ಸಂತಿಬಸ್ತವಾಡದಲ್ಲಿ ಕುರ್‌ಆನ್‌ ಸುಟ್ಟ ಪ್ರಕರಣದ ಸೂಕ್ಷ್ಮತೆ ಅರಿತು, ಅದನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ಅವರಿಗೆ ತನಿಖೆಗೆ ಸ್ಥಳೀಯ ಪೊಲೀಸರು ಸಹಕಾರ ನೀಡುತ್ತಿದ್ದಾರೆ. ಆರೋಪಿಗಳನ್ನು ಶೀಘ್ರ ಬಂಧಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆದಿವೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ನನ್ನ ಸಹೋದರನಿಂದ ಬೇರ್ಪಡಿಸಲು ಕನಸು ಕಾಣುವವರು ಯಶಸ್ವಿಯಾಗುವುದಿಲ್ಲ: ತೇಜ್ ಪ್ರತಾಪ್ ಯಾದವ್‌