Belgavi, ಕುರಾನ್ ಗ್ರಂಥ ಸುಟ್ಟ ಪ್ರಕರಣ: ಅಂಗಡಿ ಮುಂಗಟ್ಟು ಬಂದ್‌ ಮಾಡಿ ಬೀದಿಗಿಳಿದ ಮುಸ್ಲಿಮರು

Sampriya
ಶುಕ್ರವಾರ, 16 ಮೇ 2025 (17:40 IST)
Photo Credit X
ಬೆಳಗಾವಿ: ಕುರಾನ್ ಗ್ರಂಥ ಸುಟ್ಟು ಹಾಕಿದ ಹಿನ್ನೆಲೆ ವಿವಿಧ ಮುಸ್ಲಿಂ ಸಂಘಟನೆಗಳು ಹಾಗೂ ಮಸೀದಿಗಳಿಂದ ನಗರದಲ್ಲಿ ಶುಕ್ರವಾರ ಬೃಹತ್‌ ಪ್ರತಿಭಟನೆ ನಡೆಸಲಾಯಿತು.

ಇಲ್ಲಿನ ಕೋರ್ಟ್‌ ಆವರಣ ಪಕ್ಕದಲ್ಲಿರುವ ಅಂಜುಮನ್‌ ಸಂಸ್ಥೆಯ ಆವರಣದಲ್ಲಿ ಸೇರಿದ ಅಪಾರ ಸಂಖ್ಯೆಯ ಜನ, ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಸಮಾವೇಶಗೊಂಡರು.

‘ನಾರಾ ತಕ್ದೀರ್‌, ಅಲ್ಲಾಹು ಅಕ್ಬರ್‌’, ಹಿಂದೂಸ್ತಾನ್ ಜಿಂದಾಬಾದ್ ಎಂದು ನಿರಂತರ ಘೋಷಣೆ ಮೊಳಗಿಸಿದರು. ಮುಸ್ಲಿಂ ಧರ್ಮದ ಧ್ವಜಗಳನ್ನು ಎಲ್ಲೆಡೆ ಹಾರಾಡಿಸಿದರು. ಈ ವೇಳೆ ಕುರಾನ್‌ ಅನ್ನು ಸುಟ್ಟು ಹಾಕಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯ ಮಾಡಿದರು.

ತಾಲ್ಲೂಕಿನಲ್ಲಿ ಸಂತಿಬಸ್ತವಾಡ ಗ್ರಾಮದಲ್ಲಿ ಈಚೆಗೆ ಕುರಾನ್ ಗ್ರಂಥವನ್ನು ಸುಟ್ಟುಹಾಕಲಾಗಿತ್ತು. ಚನ್ನಮ್ಮ ವೃತ್ತದ ನಾಲ್ಕೂ ದಿಕ್ಕಿನಲ್ಲಿ ರಸ್ತೆ ಸಂಚಾರ ಬಂದ್ ಆಗಿದೆ.

ಇದಕ್ಕೂ ಮುನ್ನ ನಗರದ ಪ್ರಮುಖ ರಸ್ತೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳು ಸ್ವಯಂ ಪ್ರೇರಣೆಯಿಂದ ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಿ, ಬೆಂಬಲ ಸೂಚಿಸಿದರು. ಮಧ್ಯಾಹ್ನದ ನಮಾಜ್‌ ಮುಗಿಸಿದ ಬಳಿಕ ಮಸೀದಿ, ದರ್ಗಾಗಳಿಂದಲೇ ಜನ ನೇರವಾಗಿ ರಾಣಿ ಚನ್ನಮ್ಮ ವೃತ್ತಕ್ಕೆ ಬಂದು ಸೇರಿದರು.

PCB ಯೊಂದಿಗೆ ಸಮನ್ವಯದಲ್ಲಿ ಪರಿಷ್ಕೃತ ದಿನಾಂಕಗಳನ್ನು ಅಂತಿಮಗೊಳಿಸಿದ ನಂತರ BCB ಅಧಿಕೃತ ಹೇಳಿಕೆಯನ್ನು ನೀಡುವ ನಿರೀಕ್ಷೆಯಿದೆ. ಅಲ್ಲಿಯವರೆಗೆ, ಬಾಂಗ್ಲಾದೇಶದ ತಕ್ಷಣದ ಗಮನವು ಅವರ ಸಣ್ಣ ಯುಎಇ ಪ್ರವಾಸದ ಮೇಲೆ ಉಳಿದಿದೆ ಏಕೆಂದರೆ ಅವರು ಪಾಕಿಸ್ತಾನದಲ್ಲಿ ಸಂಭಾವ್ಯವಾಗಿ ಮರುಹೊಂದಿಸಲಾದ ವೇಳಾಪಟ್ಟಿಗಾಗಿ ಸಜ್ಜಾಗುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments