ಕರ್ನಾಟಕ ರಾಜ್ಯೋತ್ಸವದ ದಿನದಂದು ರಾಜ್ಯ ವಿರೋಧಿ ವರ್ತನೆ ತೋರಿದ ಬೆಳಗಾವಿ ಮೇಯರ್, ಉಪಮೇಯರ್ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಟಿ.ಬಿ.ಜಯಚಂದ್ರ ಹೇಳಿದ್ದಾರೆ.
ಕರ್ನಾಟಕ ರಾಜ್ಯೋತ್ಸವ ದಿನದಂದು ಮಹಾರಾಷ್ಟ್ರ ಏಕೀಕರಣ ಸಮಿತಿ ಕರಾಳ ದಿನಾಚರಣೆ ಆಚರಣೆಗೆ ಕುಮ್ಮಕ್ಕು ನೀಡಿದ್ದಾರೆ ಎನ್ನುವ ಆರೋಪಗಳಿರುವ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯನ್ನು ಸೂಪರ್ಸೀಡ್ ಮಾಡುವ ಬಗ್ಗೆ ಕೂಡಾ ಸರಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ.
ಈ ಹಿಂದೆ ಕೂಡಾ ರಾಜ್ಯ ಸರಕಾರ ಬೆಳಗಾವಿ ಮಹಾನಗರ ಪಾಲಿಕೆ ಸೂಪರ್ಸೀಡ್ ಮಾಡಿ ಆದೇಶ ಹೊರಡಿಸಿದೆ. ಅಗತ್ಯ ಬಿದ್ದಲ್ಲಿ ಸೂಪರ್ ಸೀಡ್ ಮಾಡಲು ಹಿಂದೇಟು ಹಾಕುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ ಜಿಲ್ಲಾಧಿಕಾರಿ ಜಯರಾಂ ಅವರಿಗೆ ವರದಿ ನೀಡುವಂತೆ ಕೋರಿದ್ದು, ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ