Webdunia - Bharat's app for daily news and videos

Install App

ಮದುವೆ ಆಗ್ತೀನಿ ಅಂತಾ ನಂಬಿಸಿ ಯುವತಿಯನ್ನು ಗರ್ಭಿಣಿ ಮಾಡಿ ಕೈಕೊಟ್ಟ!

Webdunia
ಮಂಗಳವಾರ, 7 ಮಾರ್ಚ್ 2023 (09:49 IST)
ಬೆಂಗಳೂರು : ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು 7 ತಿಂಗಳ ಗರ್ಭಿಣಿ ಮಾಡಿ ಯುವಕನೊಬ್ಬ ಕೈಕೊಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
 
ಸಾಗರ್ ಎಂಬಾತ ಯುವತಿಯೊಬ್ಬಳಿಗೆ ವಂಚಿಸಿ ಪರಾರಿಯಾಗಿದ್ದಾನೆ. ಸಂತ್ರಸ್ತೆ ಲ್ಯಾಬ್ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದಳು. ಅದೇ ಲ್ಯಾಬ್ನಲ್ಲಿ ಸಾಗರ್ ಸಿಸ್ಟಮ್ ವರ್ಕ್ ಮಾಡಿಕೊಂಡಿದ್ದ. ಈ ವೇಳೆ ಯುವತಿಯನ್ನು ಪ್ರೀತಿ ಹೆಸರಿನಲ್ಲಿ ಪುಸಲಾಯಿಸಿ ಹಲವು ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ.

ಯುವತಿ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ಕ್ರಿಯೆ ಕೂಡ ನಡೆಸಿದ್ದ. ಇದರಿಂದಾಗಿ ಯುವತಿ 7 ತಿಂಗಳ ಗರ್ಭಿಣಿಯಾಗಿದ್ದಳು. ವಿಚಾರ ತಿಳಿದು ಯುವತಿಗೆ ಬಲವಂತವಾಗಿ ಗರ್ಭಪಾತ ಮಾತ್ರೆ ನುಂಗಿಸಿದ್ದ. ಪರಿಣಾಮವಾಗಿ ಯುವತಿಗೆ ತೀವ್ರ ರಕ್ತಸ್ರಾವವಾಗಿ 7 ತಿಂಗಳ ಮಗು ಹೊರಬಂದಿತ್ತು. ನಂತರ ಚಿಕಿತ್ಸೆ ಫಲಿಸದೇ ಮಗು ಸಾವನ್ನಪ್ಪಿತು.

ವಿಚಾರ ತಿಳಿದ ಯುವತಿ ಪೋಷಕರು ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗಿದ್ದರು. ಈ ವೇಳೆ ಯುವತಿ ಪೋಷಕರ ಜೊತೆ ರಾಜಿಗಿಳಿದು ಯುವತಿಗೆ ತಾಳಿ ಕಟ್ಟಿ ಮದುವೆಯಾಗಿದ್ದ. ನಂತರ ರಿಜಿಸ್ಟರ್ ಕಚೇರಿಯಲ್ಲಿ ಅಧಿಕೃತವಾಗಿ ಮದುವೆಯಾಗುವಂತೆ ಯುವತಿ ಕೇಳಿದ್ದಳು. ಈ ವೇಳೆ ಪೋನ್ ಸ್ವಿಚ್ ಆಫ್ ಮಾಡಿ ಆರೋಪಿ ಸಾಗರ್ ಎಸ್ಕೇಪ್ ಆಗಿದ್ದಾನೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳದ ವಿಷಯದಲ್ಲಿ ಹಿನ್ನೆಲೆಯ ವ್ಯಕ್ತಿಗಳ ತನಿಖೆ: ಡಾ.ಸಿ.ಎನ್.ಅಶ್ವತ್ಥನಾರಾಯಣ್ ಒತ್ತಾಯ

ಸ್ವಾತಂತ್ರ್ಯೋತ್ಸವ ದಿನವೇ ಬೆಂಗಳೂರಿನಲ್ಲಿ ಅನುಮಾನಸ್ಪದ ಸ್ಪೋಟ: ಓರ್ವ ಸಾವು

ಮೋದಿಜೀ ಅವರಿಂದ ಯುವಜನತೆಗೆ ಸ್ವಾತಂತ್ರ್ಯದ ಮಹತ್ವ ಮನವರಿಕೆ ಮಾಡುವ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ