ಬಳ್ಳಾರಿ: ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ ಬಾಣಂತಿಯರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 2 ಲಕ್ಷ ಪರಿಹಾರವನ್ನು ನೀಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.
ಇಂದು ವಿಧಾನಸೌಧದಲ್ಲಿ ಸಭೆಯನ್ನು ನಡೆಸಿ ಆರೋಗ್ಯ ಸಚಿವರು, ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ರಾಜ್ಯ ಸರ್ಕಾರದಿಂದ ಮೃತ ಬಾಣಂತಿಯರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರವನ್ನು ನೀಡುವುದಾಗಿ ತಿಳಿಸಿದರು.
ಇನ್ನೂ ಕಂಪನಿಯಿಂದಲೂ ಪರಿಹಾರ ನೀಡಲು ಸೂಚನೆ ನೀಡಲಾಗಿದೆ. ಆಸ್ಪತ್ರೆ ಎಂಡಿಗೆ ನೋಟಿಸ್ ಕೊಡಲು ಸೂಚನೆ ಕೊಟ್ಟಿದ್ದೇನೆ ಎಂಬುದಾಗಿ ಅವರು ವಿವರಿಸಿದರು.
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಐವರು ಬಾಣಂತಿಯರ ಸರಣಿ ಸಾವು ಇಡೀ ಕರ್ನಾಟಕವನ್ನೇ ಬೆಚ್ಚಿಬೀಳಿಸಿದೆ. ಈ ಸಾವಿನ ರಹಸ್ಯ ಕೂಡ ಬಯಲಾಗಿದ್ದು, IV ಗ್ಲುಕೋಸ್ ಕಾರಣ ಎಂಬ ವರದಿ ಬಹಿರಂಗಗೊಂಡಿತ್ತು. ಇತ್ತ ಬೆಳಗಾವಿ ಜಿಲ್ಲಾ ಬಿಮ್ಸ್ ಆಸ್ಪತ್ರೆ ಆವರಣದಲ್ಲಿರುವ ಔಷಧ ಉಗ್ರಾಣದಲ್ಲಿ ಆರ್ಎಲ್ಎಸ್ (RLS) ಐವಿ ಗ್ಲುಕೋಸ್ ಪತ್ತೆ ಆಗಿದೆ.