ಬಳ್ಳಾರಿ ಬಿಜೆಪಿಯಲ್ಲಿ ಭಿನ್ನಮತ: ಬಂಡಾಯ ಅಭ್ಯರ್ಥಿಯಾಗಿ ಡಾ.ಶ್ರೀನಿವಾಸ್ ಸ್ಪರ್ಧೆ

Webdunia
ಭಾನುವಾರ, 14 ಅಕ್ಟೋಬರ್ 2018 (15:45 IST)
ಬಳ್ಳಾರಿ ಬಿಜೆಪಿಯಲ್ಲಿ ಭಿನ್ನಮತ ಕಾಣಿಸಿಕೊಂಡಿದೆ. ಟಿಕೆಟ್ ಕೈತಪ್ಪುವ ಭೀತಿ ಹಿನ್ನಲೆಯಲ್ಲಿ ಟಿಕೆಟ್ ಆಕಾಂಕ್ಷಿಗಳು ಬಂಡಾಯದ ಬಾವುಟ ಹಾರಿಸಿದ್ದು, ಪಕ್ಷೇತರರಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

ನಾನು ಕಳೆದ ಐದಾರು ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯನಾಗಿದ್ದೇನೆ. ಬಳ್ಳಾರಿ ಜಿಲ್ಲೆಯಲ್ಲಿ ಬಿಜೆಪಿಗೆ ಕೊಡುಗೆ ಕೊಟ್ಟಿದ್ದೇನೆ. ಮೂರ್ನಾಲ್ಕು ಬಾರಿ ನನಗೆ ಬೇರೆ, ಬೇರೆ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿದೆ. ಹಾಗಾಗಿ ನಾನು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಸ್ವತಂತ್ರ ಅಭ್ಯರ್ಥಿಯಾಗಿ ಲೋಕಸಭೆ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡ್ತಿದ್ದೇನೆ ಎಂದು ಡಾ.ಶ್ರೀನಿವಾಸ್ ಹೇಳಿದ್ದಾರೆ.

ನಿಷ್ಠಾವಂತವಾದ ನನಗೆ, ಶಿಸ್ತಿನ ಪಕ್ಷದಲ್ಲಿ ಟಿಕೆಟ್ ದೊರಕಿಲ್ಲ. ನಿಷ್ಠಾವಂತರಿಗೆ ಬಿಜೆಪಿ ಗುರುತಿಸಿ ಕೆಲಸ ಮಾಡುವವರಿಗೆ ಟಿಕೆಟ್ ನೀಡಬೇಕಿತ್ತು. ಆದರೆ ನೀಡಿಲ್ಲ. ಬಳ್ಳಾರಿ ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಹೆಚ್ಚಾಗುತ್ತಿದೆ ಎಂದು ದೂರಿದರು.  ಸೋಮವಾರ ಬೆಳಗ್ಗೆ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದ ಅವರು, ನನ್ನ ವೈದ್ಯಕೀಯ ಸೇವೆ ಬಳ್ಳಾರಿ ಜಿಲ್ಲೆಯಾದ್ಯಾಂತ ನಡೆಸುತ್ತಿದ್ದೇನೆ.  ನನಗೆ ಜನರೊಂದಿಗೆ ಒಡನಾಟವಿದೆ. ಜನರ ಸೇವೆ ಮಾಡುತ್ತೇನೆ ಎಂದಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಜಾತಿಗಣತಿ ಮಾಡುವಾಗಲೂ ಬಿಜೆಪಿ ನಾಯಕರಿಗೆ ವಿರೋಧಿಸುವ ಧಮ್ ಇದ್ಯಾ: ಸಿದ್ದರಾಮಯ್ಯ

ಪಾಕಿಸ್ತಾನ ವಿರುದ್ಧ ಕ್ರಿಕೆಟ್ ಗೆದ್ದರೆ ಯುದ್ಧ ಗೆದ್ದಂತಾ: ಬಿಕೆ ಹರಿಪ್ರಸಾದ್ ವ್ಯಂಗ್ಯ

ಕರ್ನಾಟಕ ಜಾತಿ ಸಮೀಕ್ಷೆ ವಿರೋಧಿಸುತ್ತಿರುವ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಫುಲ್ ಗರಂ

ಬೆಂಗಳೂರಿನಲ್ಲಿ ಯಾವಾಗ ಜಾತಿಗಣತಿ ಆರಂಭ: ಇಲ್ಲಿದೆ ಉತ್ತರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments