Publish Date: Fri, 02 Jan 2026 (20:06 IST)
Updated Date: Fri, 02 Jan 2026 (20:16 IST)
ಬಳ್ಳಾರಿ: ಬ್ಯಾನರ್ ವಿಚಾರವಾಗಿ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ನಡುವಿನ ಗಲಭೆ ಸಂಬಂಧ ರಾಜ್ಯ ಮಟ್ಟದಲ್ಲಿ ಸುದ್ದಿಯಾಗುತ್ತಿರುವ ಬೆನ್ನಲ್ಲೇ ಇದೀಗ ಜನಾರ್ದನ ಮನೆಯಲ್ಲಿ ಮತ್ತೊಂದು ಬುಲೆಟ್ ಪತ್ತೆಯಾಗಿದೆ.
ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರ ಆಪ್ತ ಸಹಾಯಕ ಚಾನೆಲ್ ಶೇಖರ್ ನೀಡಿದ ದೂರಿನ ಆಧಾರದ ಮೇಲೆ ಇಂದು ಎಫ್‌ಐಆರ್ ದಾಖಲಿಸಲಾಗಿದೆ.
ಎಫ್‌ಐಆರ್‌ನಲ್ಲಿ ಜನಾರ್ದನ ರೆಡ್ಡಿ ಅವರನ್ನು ಮೊದಲ ಆರೋಪಿಯನ್ನಾಗಿ ಹೆಸರಿಸಲಾಗಿದೆ.
ಮಾಜಿ ಶಾಸಕ ಜಿ. ಸೋಮಶೇಖರ ರೆಡ್ಡಿ ಅವರನ್ನು ಎರಡನೇ ಆರೋಪಿಯನ್ನಾಗಿ ಹೆಸರಿಸಲಾಗಿದೆ. ಮಾಜಿ ಸಚಿವ ಬಿ. ಶ್ರೀರಾಮುಲು ಅವರನ್ನು ಮೂರನೇ ಆರೋಪಿಯಾಗಿ, ಮತ್ತು ಬಳ್ಳಾರಿ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಶ್ರೀನಿವಾಸ್ ಮೋತ್ಕರ್ ಅವರನ್ನು ನಾಲ್ಕನೇ ಆರೋಪಿಯನ್ನಾಗಿ ಮಾಡಲಾಗಿದೆ. ಎಫ್‌ಐಆರ್‌ನಲ್ಲಿ ಒಟ್ಟು 11 ಜನರನ್ನು ಉಲ್ಲೇಖಿಸಲಾಗಿದೆ.