Publish Date: Fri, 02 Jan 2026 (19:54 IST)
Updated Date: Fri, 02 Jan 2026 (19:57 IST)
ಬಳ್ಳಾರಿ: ಇಲ್ಲಿ ನಡೆದ ಬ್ಯಾನರ್ ಗಲಾಟೆ ವಿಚಾರವಾಗಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಎಂಬುವವರು ಗುಂಡೇಟಿಗೆ ಬಲಿಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಸೂಚನೆಯಂತೆ ವಾಲ್ಮೀಕಿ ಪುತ್ಥಳಿ ಅನಾವರಣ ತಾತ್ಕಾಲಿಕ ಮುಂದೂಡಲಾಗಿದೆ ಎಂದು ಗ್ರಾಮೀಣ ಶಾಸಕ ಬಿ.ನಾಗೇಂದ್ರ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಇದಕ್ಕಿಂತ ವಿಜೃಂಭಣೆಯಿಂದ ಪುತ್ಥಳಿ ಅನಾವರಣ ಮಾಡಲಾಗುವುದು. ಆ ಸಮಾರಂಭಕ್ಕೆ ಎಲ್ಲರೂ ಆಗಮಿಸಲಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷ ವಾಲ್ಮೀಕಿ ಪರವಾಗಿದೆ. 15 ಎಸ್‌ಟಿ ಮೀಸಲು ಕ್ಷೇತ್ರದಲ್ಲಿ 14 ರಲ್ಲಿ ವಿಜಯಿಯಾಗಿದೆ. ಭರತ್ ರೆಡ್ಡಿ ಮಾಡಿರುವ ಕೆಲಸ ಸಹಿಸದೇ ಬಿಜೆಪಿಯವರು ಬ್ಯಾನರ್ ವಿಚಾರದಲ್ಲಿ ಗದ್ದಲ ಎಬ್ಬಿಸಿದ್ದಾರೆ. ಇದೆಲ್ಲ ಕಾಂಗ್ರೆಸ್ ಪಕ್ಷಕ್ಕೆ ಕಪ್ಪು ಚುಕ್ಜೆ ತರುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದರು.
ಗುಂಡು ಹಾರಿಸಿದ ಪ್ರಕರಣದಲ್ಲಿ ಸರ್ಕಾರ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವ ಕೆಲಸ ಮಾಡಲಿದೆ. ಮನೆ ಸೇರಿದರೂ ಮತ್ತೆ ಕಾಲು ಕೆರೆದು ಜಗಳಕ್ಕೆ ಬಂದಿದ್ದಾರೆ. ಇದು ಅವಮಾನದ ವಿಷಯವಾಗಿದೆ ಎಂದು ಹೇಳಿದರು.