Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣ: ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣ: ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ
ಬೆಂಗಳೂರು , ಬುಧವಾರ, 7 ಅಕ್ಟೋಬರ್ 2015 (14:46 IST)
ಕಳೆದ ಶನಿವಾರ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ ಇಬ್ಬರು ಆರೋಪಿಗಳಿಗೆ ನಗರದ 3ನೇ ಎಸಿಎಂಎಂ ನ್ಯಾಯಾಲಯವು ಇಂದು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. 
 
ಪ್ರಕರಣದ ತನಿಖೆ ನಡೆಸುತ್ತಿದ್ದ ನಗರದ ಮಡಿವಾಳ ಪೊಲೀಸರು, ಸುನೀಲ್ ಮತ್ತು ಯೋಗೀಶ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಇಬ್ಬರೂ ಆರೋಪಿಗಳನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪ್ರಕಱಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಮೋಹನ್ ಪ್ರಭು ಅವರು ಆರೋಪಿಗಳನ್ನು ಅ.20ರ ವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಪ್ಪಿಸಿತು. 
 
ಇನ್ನು ಟಿಟಿ ವಾಹನವೊಂದರ ಚಾಲಕ, ನಿರ್ವಾಹಕರಾಗಿದ್ದ ಈ ಇಬ್ಬರೂ ಆರೋಪಿಗಳು ಮಡಿವಾಳದಲ್ಲಿ ವಾಸವಿದ್ದ ಗ್ವಾಲಿಯರ್ ಮೂಲದ ಯುವತಿಯೋರ್ವಳ ವಾಹನದಲ್ಲಿಯೇ ಅತ್ಯಾಚಾರ ಎಸಗಿದ್ದರು. ಈ ಹಿನ್ನೆಲೆಯಲ್ಲಿ ಮಡಿವಾಳ ಪೊಲೀಸರು ಪ್ರಕರಣ ದಾಖಲಾಗಿತ್ತು. 

Share this Story:

Follow Webdunia kannada