ಬೆಂಗಳೂರು: ಹಾಸ್ಟೆಲ್ ಒಂದರಲ್ಲಿ 10 ನೇ ತರಗತಿಯ ವಿದ್ಯಾರ್ಥಿಯನ್ನು ವಿವಸ್ತ್ರಗೊಳಿಸಿ ಹಿರಿಯ ವಿದ್ಯಾರ್ಥಿಗಳು ಲೈಂಗಿಕ ದೌರ್ಜನ್ಯ, ಹಲ್ಲೆ ನಡೆಸಿದ ಹೇಯ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರಿನ ಹೊರವಲಯದಲ್ಲಿರುವ ಖಾಸಗಿ ಶಾಲೆಯ ಹಾಸ್ಟೆಲ್ ನಲ್ಲಿ ಘಟನೆ ನಡೆದಿದೆ. ಪಿಯುಸಿ ವಿದ್ಯಾರ್ಥಿಗಳು ಈ ಕೃತ್ಯವೆಸಗಿದ್ದಾರೆ. ವಿದ್ಯಾರ್ಥಿನಿಯನ್ನು ಬಲವಂತವಾಗಿ ಬಟ್ಟೆ ಬಿಚ್ಚಿಸಿ ನೃತ್ಯ ಮಾಡಲು ಹೇಳಿದ್ದಾರೆ. ಆಕೆ ಒಪ್ಪದೇ ಇದ್ದಾಗ ಹ್ಯಾಂಗರ್ ನಿಂದ ಹೊಡೆದು ಹಲ್ಲೆ ನಡೆಸಿದ್ದಾರೆ.
ಈ ಬಗ್ಗೆ ಪೋಷಕರು ದೂರು ನೀಡಿದ್ದಾರೆ. ನಮ್ಮ ಮಗಳನ್ನು ಸತತ ನಾಲ್ಕು ದಿನಗಳ ಕಾಲ ಇದೇ ರೀತಿ ಹಲ್ಲೆ, ದೌರ್ಜನ್ಯ ನಡೆಸಲಾಗಿದೆ. ಈ ಬಗ್ಗೆ ಪ್ರಾಂಶುಪಾಲರು, ಹಾಸ್ಟೆಲ್ ವಾರ್ಡನ್ ಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ ಎಂದು ಪೋಷಕರು ದೂರಿದ್ದಾರೆ.
ಇದೀಗ ಬನ್ನೇರುಘಟ್ಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ದೌರ್ಜನ್ಯವೆಸಗಿದ ಐದು ವಿದ್ಯಾರ್ಥಿಗಳು ಮತ್ತು ಪ್ರಾಂಶುಪಾಲರು, ವಾರ್ಡನ್ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡಿದ್ದಾರೆ.