Select Your Language

Notifications

webdunia
webdunia
webdunia
webdunia

ಬೆಂಗಳೂರು: ಮೆಟ್ರೋ ರೈಲು ಬರುತ್ತಿದ್ದಂತ್ತೆ ಟ್ರ್ಯಾಕ್‌ಗೆ ಜಿಗಿದ ವ್ಯಕ್ತಿ

Bengaluru Metro Case

Sampriya

ಬೆಂಗಳೂರು , ಶುಕ್ರವಾರ, 5 ಡಿಸೆಂಬರ್ 2025 (15:26 IST)
ಬೆಂಗಳೂರು: ಮೆಟ್ರೋ ರೈಲು ಬರುತ್ತಿದ್ದ ಹಾಗೇ ಟ್ರ್ಯಾಕ್‌ಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನೇರಳ ಮಾರ್ಗದ ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. 

ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ವಿಜಯಪುರ ಮೂಲದ ಶಾಂತಗೌಡ ಪಾಟೀಲ್ (38) ಎಂದು ಗುರುತಿಸಲಾಗಿದೆ. 

ಬೆಂಗಳೂರಿನ ರಾಜಾಜಿನಗರದಲ್ಲಿ ಪತ್ನಿ ಹಾಗೂ ಪುಟ್ಟ ಕಂದಮ್ಮನೊಂದಿಗೆ ವಾಸಿಸುತ್ತಿದ್ದರು. ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. 


ಮೆಟ್ರೋ ಬರುತ್ತಿದ್ದಂತೆಯೇ ವ್ಯಕ್ತಿ ಟ್ರ್ಯಾಕ್‌ಗೆ ಹಾರಿದ್ದು, ಪರಿಣಾಮ ಮೆಟ್ರೋ ಹರಿದು ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. 
ಘಟನಾ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೆಟ್ರೋ ಸಿಬ್ಬಂದಿ ಘಟನೆಯ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮತ್ತು ವೈದ್ಯಕೀಯ ಸಿಬ್ಬಂದಿ ಟ್ರ‍್ಯಾಕ್ ಮೇಲಿದ್ದ ಶವವನ್ನು ತೆರವುಗೊಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಷ್ಯಾ ಅಧ್ಯಕ್ಷ ಪುಟಿನ್ ನಡೆಯುವಾಗ ಬಲಗೈ ಚಲಿಸುವುದೇ ಇಲ್ಲ ಯಾಕೆ: ಶಾಕಿಂಗ್ ಸತ್ಯ ಬಯಲು