Select Your Language

Notifications

webdunia
webdunia
webdunia
webdunia

ಪರಪ್ಪನ ಅಗ್ರಹಾರ ಕಾಯಬೇಕಿದ್ದ ಜೈಲು ಸಿಬ್ಬಂದಿಯಿಂದಲೇ ಕನ್ನ, ಏನಿದು ಘಟನೆ

Benagaluru Central Jail

Sampriya

ಬೆಂಗಳೂರು , ಭಾನುವಾರ, 26 ಅಕ್ಟೋಬರ್ 2025 (14:49 IST)
ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ಜೈಲು ವೀಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೇ ಕಳ್ಳತನ ಮಾಡಿ, ಸಿಕ್ಕಿಬಿದ್ದಿರುವ ಬಗ್ಗೆ ವರದಿಯಾಗಿದೆ . ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಬ್ಬಂದಿಯನ್ನು ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. 

ಬಂಧಿತ ಜೈಲು ಸಿಬ್ಬಂದಿಯನ್ನು ಅಮರ್ ಪ್ರಾಂಜೆ (29) ಎಂದು ಗುರುತಿಸಲಾಗಿದೆ. ೀತ ಅಕ್ಟೋಬರ್ 23ರಂದು ಕರ್ತವ್ಯಕ್ಕೆ ಹಾಜರಾಗಿದ್ದ. ಪ್ರವೇಶದ್ವಾರದಲ್ಲಿದ್ದ ಕೆಎಸ್‌ಐಎಸ್‌ಎಫ್ ಸಿಬ್ಬಂದಿ ತಪಾಸಣೆಗೆ ಒಳಪಡಿಸಲು ಮುಂದಾಗಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಆತ ವಾಪಸ್‌ ಹೋಗಲು ಮುಂದಾಗಿದ್ದಾನೆ.

ಇದರಿಂದ ಅನುಮಾನಗೊಂಡ ಸಿಬ್ಬಂದಿ ಅವನನ್ನು ಹಿಡಿದು ತಪಾಸಣೆ ನಡೆಸಿದಾಗ ಒಳ ಉಡುಪಿನಲ್ಲಿ ಒಂದು ಸ್ಮಾರ್ಟ್‌ಫೋನ್‌, ಇಯರ್‌ ಫೋನ್‌ ಪತ್ತೆಯಾಗಿದೆ.

ತಕ್ಷಣ ಜೈಲಿನ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಅಮರ್ ಪ್ರಾಂಜೆಯನ್ನ ಬಂಧಿಸಿದ್ದಾರೆ. ಈ ಸಂಬಂಧ ಜೈಲು ಅಧೀಕ್ಷಕ ಹೆಚ್.ಎ ಪರಮೇಶ್ ನೀಡಿದ ದೂರಿನ ಮೇರೆಗೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವ್ಯಕ್ತಿಯ ವಿರುದ್ಧ ಕರ್ನಾಟಕ ಕಾರಾಗೃಹ ಕಾಯ್ದೆಯ ಸೆಕ್ಷನ್ 42 ಮತ್ತು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 323 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಪ್ರಭಾಕರ್ ಭಟ್ ಆಗಲಿ, ಅವರಪ್ಪನಾಗಲಿ ಕಾನೂನು ಎಲ್ಲರಿಗೂ ಒಂದೇ: ಪ್ರಿಯಾಂಕ್ ಖರ್ಗೆ