Publish Date: Wed, 01 Jul 2026 (22:23 IST)
Updated Date: Wed, 01 Jul 2026 (22:45 IST)
ಬೆಂಗಳೂರು: ದಿನದಿಂದ ದಿನಕ್ಕೆ ಡೇಕೇರ್ ಸೆಂಟರ್‌ನಲ್ಲಿ ಮಕ್ಕಳ ಮೇಲೆ ನಡೆಯುವ ಕ್ರೌರ್ಯಗಳ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಲೇ ಇರುತ್ತದೆ. ಇದೀಗ ಬೆಂಗಳೂರಿನಲ್ಲಿ ನಡೆದಿದೆ ಎನ್ನಲಾದ ಮಗುವಿನ ಮೇಲಿನ ಹಲ್ಲೆಯ ವಿಡಿಯೋವೊಂದು ವೈರಲ್ ಆಗಿದೆ.
ಬ್ಲರ್ ಮಾಡಿರುವ ಈ ವಿಡಿಯೋದಲ್ಲಿ ಬೆಂಗಳೂರಿನ ಕ್ಯಾಪ್ಜೆಮಿನಿ ಟೆಕ್ನಾಲಜಿ ಸರ್ವೀಸಸ್ ಕಚೇರಿಯಲ್ಲಿರುವ ಡೇಕೇರ್‌ನಲ್ಲಿ ಬಿಡಲಾದ ಪುಟ್ಟ ಕಂದಮ್ಮನ ಮೇಲೆ ದೈಹಿಕವಾಗಿ ಸಿಬ್ಬಂದಿಯೊಬ್ಬರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಸ್ನಾನಗೃಹಗಳಲ್ಲಿ ಮಗುವನ್ನು ಹಿಡಿದಿಟ್ಟು, ಅದರ ಮುಖದ ಮೇಲೆ ನೀರನ್ನು ಎರಚಿದ್ದಾರೆ. ಇನ್ನೂ ಮಗುವಿನ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದೀಗ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಿಬ್ಬಂದಿ ಹಾಗೂ ಡೇಕೇರ್ ಸೆಂಟರ್ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ವ್ಯಕ್ತವಾಗಿದೆ.
ಈಚೆಗೆ ಡೇಕೇರ್ ಸೆಂಟರ್‌ನಲ್ಲಿ ಮಕ್ಕಳ ಮೇಲೆ ನಡೆಯುತ್ತಿರುವ ಕ್ರೌರ್ಯಗಳು ವರದಿಯಾಗುತ್ತಲೇ ಇದೆ. ಇದೀಗ ಬೆಂಗಳೂರಿನಲ್ಲಿ ಎನ್ನಲಾದ ಈ ವಿಡಿಯೋ ಭಾರೀ ಆತಂಕವನ್ನು ಸೃಷ್ಟಿ ಮಾಡಿದೆ.
Bengaluru Day Care Center Viral Video, Bengaluru's Capgemini Technology Services Viral Video, Bengaluru Nursery Baby Viral Video
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ