Webdunia - Bharat's app for daily news and videos

Install App

Bengaluru:5ನೇ ಮಹಡಿಯಿಂದ ಜಿಗಿದು ದಂತ ವಿದ್ಯಾರ್ಥಿನಿ ಸಾವು, ಆತ್ಮಹತ್ಯೆಗೆ ಇದೇ ಕಾರಣವಾಯಿತಾ

Sampriya
ಸೋಮವಾರ, 14 ಏಪ್ರಿಲ್ 2025 (20:17 IST)
Photo Credit X
ಬೆಂಗಳೂರು: ಯಶವಂತಪುರದ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ದಂತ ವೈದ್ಯಕೀಯದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ಇಂದು ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಸೌಮ್ಯ ಎಂದು ಗುರುತಿಸಲಾಗಿದೆ.

ಪರೀಕ್ಷೆಯ ಭಯದಿಂದ 21 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಅಪಾರ್ಟ್‌ಮೆಂಟ್​​ನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪೊಲೀಸರು ಅಸಹಜ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತ ಸೌಮ್ಯ ಪರೀಕ್ಷಾ ಸಮಯದಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗಿದೆ. ಆತ್ಮಹತ್ಯೆಗೂ ಮುನ್ನ ಯಾವುದೇ ಡೆತ್​ ನೋಟ್​ ಬರೆದಿಟ್ಟಿಲ್ಲ. ಈ ಸಂಬಂಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಶವಂತಪುರದ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ದಂತ ವೈದ್ಯಕೀಯ ಕೋರ್ಸ್ ಓದುತ್ತಿದ್ದ ಸೌಮ್ಯ, ತಮ್ಮ ತಂದೆ, ತಾಯಿ ಮತ್ತು ಸಹೋದರನ ಜತೆ ವಾಸವಾಗಿದ್ದರು.

 ಸೌಮ್ಯ ತಂದೆ ಗಣೇಶ್ ನಾರಾಯಣ್​ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದಾರೆ. ಮೂಲತಃ ಆಂಧ್ರದವರಾಗಿದ್ದು, ಮಗಳನ್ನು ಓದಿಸುವ ಉದ್ದೇಶಕ್ಕೆ ಕುಟುಂಬ ಸಮೇತ ಬೆಂಗಳೂರಿಗೆ ಬಂದು ನೆಲೆಸಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments