Select Your Language

Notifications

webdunia
webdunia
webdunia
webdunia

ಬೆಂಗಳೂರು ಮೆಟ್ರೋ ಹುದ್ದೆ ಭರ್ತಿ: ಲಿಖಿತ ಪರೀಕ್ಷೆ ಮುಂದೂಡಿಕೆ

ಬೆಂಗಳೂರು ಮೆಟ್ರೋ ಹುದ್ದೆ ಭರ್ತಿ: ಲಿಖಿತ ಪರೀಕ್ಷೆ ಮುಂದೂಡಿಕೆ
bangalore , ಶುಕ್ರವಾರ, 2 ಜೂನ್ 2023 (13:56 IST)
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ವಿವಿಧ ವೃಂದಗಳ 236 ಹುದ್ದೆಗಳ ಭರ್ತಿಗಾಗಿ ಬರುವ ಜೂನ್ 6ರಿಂದ 8ರವರೆಗೆ ನಡೆಯಬೇಕಿದ್ದ ಲಿಖಿತ ಪರೀಕ್ಷೆಯನ್ನು ಮುಂದೂಡಿಕೆ ಮಾಡಿರುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬುಧವಾರ ಪ್ರಕಟಿಸಿದೆ.
 
ಪದವಿಪೂರ್ವ ಶಿಕ್ಷಣ ಇಲಾಖೆಯ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಪೂರಕ ಪರೀಕ್ಷೆ ಹಿನ್ನೆಲೆಯಲ್ಲಿ ಈ ಮುಂದೂಡಿಕೆ ಮಾಡಿರುವುದಾಗಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಪರೀಕ್ಷೆ ನಡೆಯುವ ಬದಲೀ ದಿನಾಂಕಗಳನ್ನು ಪ್ರಾಧಿಕಾರದ ಜಾಲತಾಣದಲ್ಲಿ ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು‌ ಎಂದು ಅವರು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಂಚ ಗ್ಯಾರಂಟಿಗೆ ಪಿಎಂ ಕಿಸಾನ್ ಯೋಜನೆಗೆ ಕತ್ತರಿ?