Select Your Language

Notifications

webdunia
webdunia
webdunia
webdunia

ಬೆಂಗಳೂರು, ಕರಾವಳಿ ಭಾಗದಲ್ಲಿ ಮಳೆ

ಬೆಂಗಳೂರು, ಕರಾವಳಿ ಭಾಗದಲ್ಲಿ ಮಳೆ
magaluru , ಶನಿವಾರ, 27 ಆಗಸ್ಟ್ 2022 (14:15 IST)
ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದಲ್ಲಿ ಮಳೆ ಹೆಚ್ಚಾಗಿದೆ. ಇನ್ನೂ ಒಂದು ವಾರ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ. ಕರ್ನಾಟಕ ಮಾತ್ರವಲ್ಲದೆ ನೆರೆಯ ರಾಜ್ಯಗಳಲ್ಲೂ ಮಳೆಯ ಅಬ್ಬರ ಜೋರಾಗಿದೆ. ಬೆಂಗಳೂರಿನಲ್ಲೂ ಕಳೆದ 2 ದಿನಗಳಿಂದ ಮಳೆ ಹೆಚ್ಚಾಗಿದೆ. ಇಂದಿನಿಂದ ಆಗಸ್ಟ್​ 31ರವರೆಗೂ ಕರ್ನಾಟಕದ ಬೆಂಗಳೂರು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಕೋಲಾರ, ಮೈಸೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿಯ ಗಣೇಶ ಚತುರ್ಥಿಯವರೆಗೂ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳಿವೆ.
ಕರ್ನಾಟಕದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕರ್ನಾಟಕದಲ್ಲಿ ಇಂದು ಭಾರೀ ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ನಿಂದ ಗ್ರೀನ್ ಸಿಗ್ನಲ್‌