ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆ ಬಂದು ನೆರೆಯಂತಾಗಿದ್ದು ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್ ಇದು ಹೊಸ ಸಮಸ್ಯೆಯೇನೂ ಅಲ್ಲ ಎಂದಿದ್ದಾರೆ.
ಬೆಂಗಳೂರಿನಲ್ಲಿ ನಿನ್ನೆ ರಾತ್ರಿಯಿಡೀ ಸುರಿದ ಮಳೆಗೆ ಕಂಪೌಂಡ್ ಕುಸಿದು ಓರ್ವ ಮಹಿಳೆ ಸಾವನ್ನಪ್ಪಿದ್ದಾಳೆ. ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ರಸ್ತೆಗಳು ಸ್ವಿಮ್ಮಿಂಗ್ ಪೂಲ್ ನಂತಾಗಿದೆ. ಬೆಂಗಳೂರಿನ ಪರಿಸ್ಥಿತಿ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಟ್ರೋಲ್ ಆಗುತ್ತಿದೆ.
ಇದರ ನಡುವೆಯೇ ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿದ್ದಾರೆ. ನೆರೆಪೀಡಿತ ಪ್ರದೇಶಗಳಿಗೆ ವೈಯಕ್ತಿಕವಾಗಿ ಭೇಟಿ ಕೊಟ್ಟು ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತೇನೆ. ಈವತ್ತು ಅನುಭವಿಸುತ್ತಿರುವ ಸಮಸ್ಯೆ ಹೊಸದೇನಲ್ಲ. ಹಿಂದೆಯೂ ಇತ್ತು. ಈ ಸಮಸ್ಯೆ ಬಗೆಹರಿಸಲು ಪ್ರಯತ್ನ ಪಡುತ್ತೇನೆ. ನಾನೂ ನಿಮ್ಮಲ್ಲಿ ಒಬ್ಬ. ನಿಮ್ಮ ಜೊತೆಗೆ ಯಾವತ್ತೂ ಇರುತ್ತೇನೆ ಎಂದಿದ್ದಾರೆ.