Publish Date: Sun, 08 Jun 2025 (16:45 IST)
Updated Date: Sun, 08 Jun 2025 (16:47 IST)
ಬೆಂಗಳೂರು: ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯವೇ ಕಾರಣ ಎಂದು ಆರೋಪಿಸಿ ಬಿಜೆಪಿ ಸರ್ಕಾರ ಇಂದು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿತು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ (RCB) ಟ್ರೋಫಿ ಗೆದ್ದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಸಮೀಪ ನಡೆದ ಕಾಲ್ತುಳಿತದ ಘಟನೆಯಲ್ಲಿ ಬರೋಬ್ಬರಿ 11 ಮಂದಿ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದರು.
ಈ ದುರ್ಘಟನೆಗೆ ರಾಜ್ಯ ಸರ್ಕಾರದ ನಡೆಯ ಕಾರಣ ಎಂದು ಬಿಜೆಪಿ ಗಂಭೀರ ಆರೋಪ ಮಾಡುತ್ತಿದೆ. ಈ ಹಿನ್ನೆಲೆ ಬಿಜೆಪಿ ನಾಯಕರು ಇಂದು ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣ ಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್, ಗೋವಿಂದ ಕಾರಜೋಳ, ವಿರೋಧ ಪಕ್ಷದ ಉಪನಾಯಕರಾದ ಅರವಿಂದ್, ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜೀವ್, ಸಂಸದರು, ಶಾಸಕರು, ಪರಿಷತ್ ಸದಸ್ಯರು ಮತ್ತು ಪ್ರಮುಖರು ಉಪಸ್ಥಿತರಿದ್ದರು.