Select Your Language

Notifications

webdunia
webdunia
webdunia
webdunia

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಬೆಂಗಳೂರು ಕಾಲ್ತುಳಿತ

Sampriya

ಬೆಂಗಳೂರು , ಶನಿವಾರ, 7 ಜೂನ್ 2025 (18:51 IST)
ಬೆಂಗಳೂರು: M ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಗೃಹ ಸಚಿವ ಜಿ. ಪರಮೇಶ್ವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿರುವುದಾಗಿ ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ತಿಳಿಸಿದ್ದಾರೆ.

ಕಾಲ್ತುಳಿತ ಪ್ರಕರಣದಲ್ಲಿ ಮೊದಲ ಆರೋಪಿ ಸಿದ್ದರಾಮಯ್ಯ ಮತ್ತು ಎರಡನೇ ಆರೋಪಿ ಡಿ.ಕೆ. ಶಿವಕುಮಾರ್ ಆಗಿದ್ದು, ಇಬ್ಬರೂ ರಾಜಕೀಯ ಲಾಭ ಪಡೆಯುವ ಉದ್ದೇಶವನ್ನು ಹೊಂದಿದ್ದರು(ಆರ್‌ಸಿಬಿ ಗೆಲುವಿನಿಂದ). ಅಧಿಕಾರ ದುರುಪಾಯೋಗಕ್ಕೆ ಈ ಸಾವು ಸಂಭವಿಸಿದೆ. 

ನಾನು ಜಿ. ಪರಮೇಶ್ವರ ಅವರನ್ನು ಮೂರನೇ ಆರೋಪಿ ಎಂದು ಉಲ್ಲೇಖಿಸಿದ್ದೇನೆ. ನನ್ನ ಪ್ರಕಾರ, ಅವರಿಗೆ ಯಾವುದೇ ಉದ್ದೇಶವಿಲ್ಲ. ಆದರೆ ಅವರು ನಿರ್ಲಕ್ಷ್ಯ ವಹಿಸಿದ್ದರು ಮತ್ತು ಗೃಹ ಸಚಿವರಾಗಿ ವಿಫಲರಾಗಿದ್ದಾರೆ ಎಂದು ರಾಜೀವ್ ದೂರಿದ್ದಾರೆ.

ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ದುರಂತಕ್ಕೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನೈತಿಕ ಹೊಣೆ ಹೊರಬೇಕಾಗುತ್ತದೆ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ದೆಹಲಿ ಸಿಎಂ ರೇಖಾ ಗುಪ್ತಾ ಕೊಲ್ಲುವುದಾಗಿ ಬೆದರಿಕೆ: ವ್ಯಕ್ತಿ ಅರೆಸ್ಟ್‌