Bengaluru Stampede: ನಾವಲ್ಲ ನೀವೇ ಮಾಡಿರೋದು.. ಸರ್ಕಾರದ ವಿರುದ್ಧ ತಿರುಗಿಬಿದ್ದ ಕೆಎಸ್ ಸಿಎ

Krishnaveni K
ಶುಕ್ರವಾರ, 6 ಜೂನ್ 2025 (15:03 IST)
ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ಘಟನೆಗೆ ನಿಮ್ಮ ಬೇಜವಾಬ್ಧಾರಿ ಕಾರಣ ಎಂಬಂತೆ ಬಿಂಬಿಸಲು ಹೊರಟ ರಾಜ್ಯ ಸರ್ಕಾರಕ್ಕೆ ಕೆಎಸ್ ಸಿಎ ತಿರುಗೇಟು ನೀಡಿದೆ. ಸರ್ಕಾರದ ವಿರುದ್ಧವೇ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ.

ಘಟನೆ ಬಗ್ಗೆ ನಿನ್ನೆಯಷ್ಟೇ ಕೆಎಸ್ ಸಿಎ ಮತ್ತು ಆರ್ ಸಿಬಿ ಫ್ರಾಂಚೈಸಿ ವಿರುದ್ಧ ವಿವಿಧ ಸೆಕ್ಷನ್ ಗಳಡಿಯಲ್ಲಿ ಕೇಸ್ ದಾಖಲಿಸಲಾಗಿತ್ತು. ಇದೀಗ ಸರ್ಕಾರದ ವಿರುದ್ಧ ತಿರುಗಿಬಿದ್ದಿರುವ ಕೆಎಸ್ ಸಿಎ, ಸಂಭ್ರಮಾಚರಣೆಗೆ ಕರೆ ಕೊಟ್ಟಿದ್ದೇ ಸರ್ಕಾರ. ಆದರೆ ಈಗ ಜನರ ಆಕ್ರೋಶ ತಪ್ಪಿಸಲು ನಮ್ಮ ಮೇಲೆ ಆರೋಪ ಮಾಡುತ್ತಿದೆ ಎಂದು ಆರೋಪಿಸಿದೆ.

ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸನ್ಮಾನ ಮಾಡುವ ಯೋಜನೆ ಸರ್ಕಾರದ್ದೇ ಆಗಿತ್ತು. ಈಗ ಘಟನೆಯ ಹೊಣೆಯನ್ನು ಕೆಎಸ್ ಸಿಎ ಮೇಲೆ ಹಾಕಲು ನೋಡಲಾಗುತ್ತಿದೆ. ಆದರೆ ಪೊಲೀಸರಿಂದ ರಕ್ಷಣೆ ಕೊಡಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಕೆಎಸ್ ಸಿಎ ರಿಟ್ ಅರ್ಜಿಯಲ್ಲಿ ಹೇಳಿದೆ.

ಪೊಲೀಸರನ್ನು ಅಮಾನತು ಮಾಡಿ ಸ್ವತಃ ಸಿಎಂ ಅವರೇ ವೈಫಲ್ಯವನ್ನು ಒಪ್ಪಿಕೊಂಡಿದ್ದಾರೆ. ಇದರ ಮೇಲೆ ಕೆಎಸ್ ಸಿಎ ಅಧಿಕಾರಿಗಳನ್ನು ಬಂಧಿಸಲು ಮಾಧ್ಯಮಗಳ ಮೂಲಕ ಆದೇಶ ನೀಡಿದ್ದಾರೆ ಎಂದು ಕೆಎಸ್ ಸಿಎ ಆರೋಪಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments