Publish Date: Fri, 06 Jun 2025 (16:47 IST)
Updated Date: Fri, 06 Jun 2025 (16:48 IST)
ಬೆಂಗಳೂರು: ಎಂ ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದುಕೋರಿ ಕೋರ್ಟ್ ಮೆಟ್ಟಿಲೇರಿದ್ದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ಇದೀಗ ತಾತ್ಕಾಲಿಕ ರಿಲೀಫ್ ಸಿಕಲ್ಕಿದೆ.
ಎಫ್‌ಐಆರ್ ರದ್ದುಗೊಳಿಸುವಂತೆ ಕೆಎಸ್‌ಸಿಎ ಅಧ್ಯಕ್ಷ ರಘುರಾಮ್ ಭಟ್ ಮತ್ತು ಇತರ ಕೆಲವು ಪದಾಧಿಕಾರಿಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಕೈಕೋರ್ಟ್ ಏಕಸದಸ್ಯ ಪೀಠವು ಮಧ್ಯಂತರ ಆದೇಶ ಹೊರಡಿಸಿ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ವಿರುದ್ಧ ಬಲವಂತದ ಕ್ರಮ ಬೇಡ ಎಂದಿದೆ.
ಗುರುವಾರ ಪೊಲೀಸರು ಆರ್‌ಸಿಬಿ, ಈವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತದಲ್ಲಿ 11ಮಂದಿ ಸಾವನ್ನಪ್ಪಿ, 56 ಜನರು ಗಾಯಗೊಂಡಿದ್ದಾರೆ.
ಈಮಧ್ಯೆ, ಆರ್‌ಸಿಬಿ ಮತ್ತು ಡಿಎನ್‌ಎ ಎಂಟರ್‌ಟೈನ್‌ಮೆಂಟ್‌ನ ನಾಲ್ವರು ಅಧಿಕಾರಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ಶುಕ್ರವಾರ ತಿಳಿಸಿವೆ.