Bengaluru stampede: RCB ಮೂವರು ಆಯೋಜಕರು ಅರೆಸ್ಟ್

Krishnaveni K
ಶುಕ್ರವಾರ, 6 ಜೂನ್ 2025 (09:21 IST)
Photo Credit: X
ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಮೈದಾನ ಬಳಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಮೂವರು ಆಯೋಜಕರನ್ನು ಬಂಧಿಸಲಾಗಿದೆ.

ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಆರ್ ಸಿಬಿ ಮ್ಯಾನೇಜ್ ಮೆಂಟ್ ನ ಮೂವರು ಆಯೋಜಕರನ್ನು ಬಂಧಿಸಲಾಗಿದೆ. ಓರ್ವನನನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ನಿನ್ನೆ ಸಂಜೆ ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಸೇರಿದಂತೆ ಪ್ರಮುಖ ಅಧಿಕಾರಿಗಳ ತಲೆದಂಡವಾಗಿತ್ತು.

ಕೆಂಪೇಗೌಡ ಏರ್ ಪೋರ್ಟ್ ಮಾರ್ಗವಾಗಿ ಎಸ್ಕೇಪ್ ಆಗಲು ಯತ್ನಿಸುತ್ತಿದ್ದ ಮೂವರು ಆಯೋಜಕರನ್ನು ಬಂಧಿಸಲಾಗಿದೆ. ಮುಂಬೈಗೆ ತೆರಳುತ್ತಿದ್ದ ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ, ಡಿಎನ್ಎ ಮ್ಯಾನೇಜ್ ಮೆಂಟ್ ಸಿಬ್ಬಂದಿ ಸುನಿಲ್ ಮ್ಯಾಥ್ಯೂ ಕಿರಣ್ ಮತ್ತು ಸುಮಂತ್ ಎಂಬವರನ್ನು ಬಂಧಿಸಲಾಗಿದೆ.

ಕಬ್ಬನ್ ಪಾರ್ಕ್ ಪೊಲೀಸರು ಆರೋಪಿಗಳನ್ನು ಏರ್ ಪೋರ್ಟ್ ನಿಂದ ಬಂಧಿಸಿ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಪೊಲೀಸರು ಅನುಮತಿ ನಿರಾಕರಿಸಿದರೂ ಆರ್ ಸಿಬಿ ಸೋಷಿಯಲ್ ಮೀಡಿಯಾದಲ್ಲಿ ವಿಕ್ಟರಿ ಪೆರೇಡ್ ಇದೆ ಎಂದು ಆರ್ ಸಿಬಿ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ಪೋಸ್ಟ್ ಮಾಡಿ ಡಿಲೀಟ್ ಮಾಡಿರುವ ಆರೋಪ ನಿಖಿಲ್ ಸೋಸಲೆ ಮೇಲಿದೆ.

ಅಲ್ಲದೆ ಉಚಿತ ಪಾಸ್ ಘೋಷಣೆ ಮಾಡಿರುವುದು, ಗೇಟ್ ನಂ.9 ಮತ್ತು 10 ರಲ್ಲಿ ಪಾಸ್ ಸಿಗುತ್ತದೆ ಎಂದು ಹೇಳಿ ಮಧ್ಯಾಹ್ನವಾದರೂ ಟಿಕೆಟ್ ನೀಡಲಿಲ್ಲ. ನಿಖಿಲ್ ಸೂಚನೆಯಂತೇ ಡಿಎನ್ಎ ಕಂಪನಿ ವರ್ತಿಸಿದೆ. ಈ ಎಲ್ಲಾ ಕಾರಣಕ್ಕೆ ಈ ಮೂವರನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments