ಬೆಂಗಳೂರು: ನಾಯಿಯನ್ನು ಕೊಂದು ಕ್ರೌರ್ಯ ಮೆರೆದಿದ್ದ ಪಾಪಿ ಕೊನೆಗೂ ಅರೆಸ್ಟ್‌

Sampriya
ಮಂಗಳವಾರ, 4 ನವೆಂಬರ್ 2025 (15:53 IST)
Photo Credit X
ಬೆಂಗಳೂರು: ಲಿಫ್ಟ್‌ನಲ್ಲಿ ನೆಲಕ್ಕೆ ಬಡಿದು ನಾಯಿಯನ್ನು ಕೊಂದು ಕ್ರೌರ್ಯ ಮೆರೆದಿದ್ದ ಕೆಲಸದಾಕೆ ಮಹಿಳೆಯನ್ನು ಪೊಲೀಸರು ಅರೆಸ್ಟ್  ಮಾಡಿದ್ದಾರೆ. 

ಬಾಗಲೂರಿನ ಅಪಾರ್ಟ್‌ಮೆಂಟ್‌ವೊಂದರ ಲಿಫ್ಟ್‌ನಲ್ಲಿ ನಾಯಿಮರಿಯನ್ನು ನೆಲಕ್ಕೆ ಬಡಿದು ಕೊಂದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.  ಈ ಘಟನೆ ನವೆಂಬರ್ 1 ರಂದು ನಡೆದಿದೆ. 

ನಾಯಿಗಳನ್ನು ಲಿಫ್ಟ್‌ನೊಳಗೆ ತಂದೆ ಕೆಲಸದಾಕೆ ಅದನ್ನು ನೆಲಕ್ಕೆ ಬಡಿಯುತ್ತಾಳೆ. ಇದು ಸಿಸಿಟಿವಿ ಕ್ಯಾಮಾರದಲ್ಲಿ ಸೆರೆಯಾಗಿದೆ. 

ಈ ಸಂಬಂಧ 23 ವರ್ಷದ ಮಹಿಳೆಯೊಬ್ಬರು ದೂರು ಸಲ್ಲಿಸಿದ್ದು, ತನ್ನ ನಾಲ್ಕು ವರ್ಷದ ನಾಯಿ ಗೋಫಿಯನ್ನು ನೋಡಿಕೊಳ್ಳಲು ಪುಷ್ಪಲತಾ ಎಂಬಾಕೆಯನ್ನು ತಿಂಗಳಿಗೆ ರೂ.23,000 ಸಂಬಳಕ್ಕೆ ಸೆಪ್ಟೆಂಬರ್ 11 ರಿಂದ ನೇಮಿಸಿಕೊಳ್ಳಲಾಗಿತ್ತು. ನವೆಂಬರ್ 1 ರಂದು ನಾಯಿ ಸಾವನ್ನಪ್ಪಿತ್ತು. ಹೇಗೆ ನಾಯಿ ಸಾವನ್ನಪ್ಪಿತ್ತು ಎಂದು ಪುಷ್ಪಲತಾಳನ್ನು ಪ್ರಶ್ನಿಸಿದಾಗ ಗೊತ್ತಿಲ್ಲ ಎಂದಿದ್ದರು. 

ತದನಂತರ ಸಿಸಿವಿಟಿ ದೃಶ್ಯಾವಳಿ ಪರಿಶೀಲಿಸಿದಾಗ ಲಿಫ್ಟ್ ಬಳಿ ನಾಯಿ ಇರುವುದು ಕಂಡುಬಂದಿತ್ತು. ಆಕೆ ನಾಯಿಯನ್ನು ಲಿಫ್ಟ್ ನೊಳಗೆ ಕರೆದೊಯ್ದು, ನೆಲಕ್ಕೆ ಬಡಿದಿರುವುದರಿಂದ ಅದು ಸಾವನ್ನಪ್ಪಿದೆ ಎಂದು ದೂರುದಾರ ಮಹಿಳೆ ಆರೋಪಿಸಿದ್ದಾರೆ.

ಭಾರತೀಯ ನ್ಯಾಯ ಸಂಹಿತಾದ ಸೆಕ್ಷನ್ 325 ( ಪ್ರಾಣಿಯನ್ನು ಕೊಲ್ಲುವ ಅಥವಾ ಅಂಗವಿಕಲಗೊಳಿಸುವ ಮೂಲಕ ಮಾಡುವ ದುಷ್ಕೃತ್ಯ) ಅಡಿಯಲ್ಲಿ ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಾನುವಾರ ಪುಷ್ಪಲತಾ ಅವರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ಮುಂದಿನ ಸುದ್ದಿ
Show comments