ಬೆಂಗಳೂರು: ಕಟ್ಟಡವೊಂದಕ್ಕೆ ಪಾಯ ತೆಗೆಯುತ್ತಿದ್ದ ವೇಳೆ ಪಕ್ಕದಲ್ಲಿದ್ದ ಎರಡು ಅಂತಸ್ತಿನ ಮನೆ ಕುಸಿದ ಘಟನೆ ಬೆಂಗಳೂರಿನ ಭೀಮಾ ನಗರದ ತಿಪ್ಪಸಂದ್ರದಲ್ಲಿ ನಡೆದಿದೆ.
ಕಟ್ಟಡದ ಪಕ್ಕದಲ್ಲಿ ಮತ್ತೊಂದು ಕಟ್ಟಡಕ್ಕೆ ಪಾಯ ತೆಗೆಯುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಮನೆಯಲ್ಲಿದ್ದವರನ್ನು ಪೊಲೀಸರು ಹೊರಕ್ಕೆ ಕಳುಹಿಸಿದ್ದಾರೆ.
ಈ ಘಟನೆ ಇಂದು ಸಂಜೆ 4:15ರ ಸುಮಾರಿಗೆ ನಡೆದಿದೆ. ಕಟ್ಟಡದಲ್ಲಿ ಐದು ಬಾಡಿಗೆ ಮನೆಗಳಿದ್ದವು. ಕಟ್ಟಡ ಕುಸಿದ ವೇಳೆ ಮನೆಯಲ್ಲಿದ್ದವರು ಹೊರಗೆ ಓಡಿದ್ದಾರೆ.
ಬೇಸ್‌ಮೆಂಟ್‌ನಲ್ಲಿ ಐದಕ್ಕೂ ಹೆಚ್ಚು ಬೈಕ್‌ಗಳು ಜಖಂಗೊಂಡಿವೆ. ಸದ್ಯಕ್ಕೆ ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ದೌಡಾಯಿಸಿದ್ದಾರೆ. ಕಟ್ಟಡ ಮತ್ತಷ್ಟು ಕುಸಿಯುವ ಸಾಧ್ಯತೆಯಿದ್ದು, ಮನೆಯ ಎರಡೂ ಕಡೆ ಬ್ಯಾರಿಕೇಡ್ ಹಾಕಿ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ.