ಬೆಂಗಳೂರು ಮಹಾನಗರದ ಪಾದಚಾರಿ ಮಾರ್ಗಗಳಲ್ಲಿ ಅಳವಡಿಸಿರುವ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳ ಸ್ಥಳಾಂತರ ಪ್ರಕ್ರಿಯೆ ವಿಳಂಬಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಅಷ್ಟೇ ಅಲ್ಲದೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಖುದ್ದು ಹಾಜರಾಗಿ ವಿವರಣೆ ನೀಡುವಂತೆ ಗುರುವಾರ ಆದೇಶ ನೀಡಿದೆ.
ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಖುದ್ದು ಹಾಜರಾಗಿ ವಿವರಣೆ ನೀಡುವಂತೆ ಗುರುವಾರ ಆದೇಶ ನೀಡಿದೆ.
ನಗರದಲ್ಲಿ ಪಾದಚಾರಿ ಮಾರ್ಗ ಹಾಗೂ ರಾಜಕಾಲುವೆಗಳ ಮೇಲಿರುವ ಟ್ರಾನ್ಸ್ ಫಾರ್ಮರ್ ತೆರವಿಗೆ ಆದೇಶಿಸುವಂತೆ ಕೋರಿ ನಿವೃತ್ತ ವಿಂಗ್ ಕಮಾಂಡರ್ ವಿ.ಜಿ. ಅತ್ರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯಪೀಠ ವಿಚಾರಣೆ ನಡೆಸಿತು.
ಬೆಸ್ಕಾಂ ವಾದ ಆಲಿಸಿದ ಬಳಿಕ ನ್ಯಾಯಪೀಠ, ಸಾಕಷ್ಟು ಸಮಯಾವಕಾಶ ನೀಡಿದ್ದರೂ ಟ್ರಾನ್ಸ್‌ಫಾರ್ಮರ್‌ಗಳನ್ನು ಸ್ಥಳಾಂತರಿಸಿಲ್ಲ. ಇದರಿಂದ, ಸಾರ್ವಜನಿಕರಿಗೆ ಅನನುಕೂಲವಾಗುವ ಜತೆಗೆ ಅವರೇ ಜೀವವನ್ನು ಅಪಾಯಕ್ಕೆ ದೂಡಿದಂತಾಗಿದೆ ಎಂದು ತರಾಟೆಗೆ ತೆಗೆದುಕೊಂಡಿತು.
ಜೊತೆಗೆ ಅರ್ಜಿಯ ಮುಂದಿನ ವಿಚಾರಣೆಗೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಖುದ್ದು ಹಾಜರಾಗಿ ಟ್ರಾನ್ಸ್‌ಫಾರ್ಮರ್‌ಗಳ ಸ್ಥಳಾಂತರ ವಿಳಂಬಕ್ಕೆ ವಿವರಣೆ ನೀಡಬೇಕು ಎಂದು ತಾಕೀತು ಮಾಡಿ ವಿಚಾರಣೆಯನ್ನು ಏ.7ಕ್ಕೆ ಮುಂದೂಡಿತು.
ಇತ್ತೀಚೆಗೆ ಉಲ್ಲಾಳ ಸಮೀಪದ ಮಂಗನಹಳ್ಳಿಯಲ್ಲಿ ವಿದ್ಯುತ್ ಪರಿವರ್ತಕ ಸ್ಪೋಟಗೊಂಡು ಇಬ್ಬರು ಮೃತಪಟ್ಟ ಘಟನೆಯ ಬಗ್ಗೆ ನ್ಯಾಯಾಲಯ ಬೇಸರ ವ್ಯಕ್ತಪಡಿಸಿದೆ.