Webdunia - Bharat's app for daily news and videos

Install App

ಬೆಸ್ಕಾಂ ಅವಘಡ ಎಂ.ಡಿ. ಬುಲಾವ್ ನೀಡಿದ ನ್ಯಾಯಾಲಯ..!!

Webdunia
ಶುಕ್ರವಾರ, 1 ಏಪ್ರಿಲ್ 2022 (14:55 IST)
ಬೆಂಗಳೂರು ಮಹಾನಗರದ ಪಾದಚಾರಿ ಮಾರ್ಗಗಳಲ್ಲಿ ಅಳವಡಿಸಿರುವ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳ ಸ್ಥಳಾಂತರ ಪ್ರಕ್ರಿಯೆ ವಿಳಂಬಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
 
ಅಷ್ಟೇ ಅಲ್ಲದೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಖುದ್ದು ಹಾಜರಾಗಿ ವಿವರಣೆ ನೀಡುವಂತೆ ಗುರುವಾರ ಆದೇಶ ನೀಡಿದೆ.
ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಖುದ್ದು ಹಾಜರಾಗಿ ವಿವರಣೆ ನೀಡುವಂತೆ ಗುರುವಾರ ಆದೇಶ ನೀಡಿದೆ.
ನಗರದಲ್ಲಿ ಪಾದಚಾರಿ ಮಾರ್ಗ ಹಾಗೂ ರಾಜಕಾಲುವೆಗಳ ಮೇಲಿರುವ ಟ್ರಾನ್ಸ್ ಫಾರ್ಮರ್ ತೆರವಿಗೆ ಆದೇಶಿಸುವಂತೆ ಕೋರಿ ನಿವೃತ್ತ ವಿಂಗ್ ಕಮಾಂಡರ್ ವಿ.ಜಿ. ಅತ್ರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯಪೀಠ ವಿಚಾರಣೆ ನಡೆಸಿತು.
ಬೆಸ್ಕಾಂ ವಾದ ಆಲಿಸಿದ ಬಳಿಕ ನ್ಯಾಯಪೀಠ, ಸಾಕಷ್ಟು ಸಮಯಾವಕಾಶ ನೀಡಿದ್ದರೂ ಟ್ರಾನ್ಸ್‌ಫಾರ್ಮರ್‌ಗಳನ್ನು ಸ್ಥಳಾಂತರಿಸಿಲ್ಲ. ಇದರಿಂದ, ಸಾರ್ವಜನಿಕರಿಗೆ ಅನನುಕೂಲವಾಗುವ ಜತೆಗೆ ಅವರೇ ಜೀವವನ್ನು ಅಪಾಯಕ್ಕೆ ದೂಡಿದಂತಾಗಿದೆ ಎಂದು ತರಾಟೆಗೆ ತೆಗೆದುಕೊಂಡಿತು.
 
ಜೊತೆಗೆ ಅರ್ಜಿಯ ಮುಂದಿನ ವಿಚಾರಣೆಗೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಖುದ್ದು ಹಾಜರಾಗಿ ಟ್ರಾನ್ಸ್‌ಫಾರ್ಮರ್‌ಗಳ ಸ್ಥಳಾಂತರ ವಿಳಂಬಕ್ಕೆ ವಿವರಣೆ ನೀಡಬೇಕು ಎಂದು ತಾಕೀತು ಮಾಡಿ ವಿಚಾರಣೆಯನ್ನು ಏ.7ಕ್ಕೆ ಮುಂದೂಡಿತು.
 
ಇತ್ತೀಚೆಗೆ ಉಲ್ಲಾಳ ಸಮೀಪದ ಮಂಗನಹಳ್ಳಿಯಲ್ಲಿ ವಿದ್ಯುತ್ ಪರಿವರ್ತಕ ಸ್ಪೋಟಗೊಂಡು ಇಬ್ಬರು ಮೃತಪಟ್ಟ ಘಟನೆಯ ಬಗ್ಗೆ ನ್ಯಾಯಾಲಯ ಬೇಸರ ವ್ಯಕ್ತಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments