Select Your Language

Notifications

webdunia
webdunia
webdunia
webdunia

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ನಂಬಿಕೆ ದ್ರೋಹ: ಬಹುಭಾಷಾ ನಟ ಪ್ರಕಾಶ್‌ ರಾಜ್ ವಾಗ್ದಾಳಿ

Multilingual actor Prakash Raj

Sampriya

ಬೆಂಗಳೂರು , ಶುಕ್ರವಾರ, 11 ಜುಲೈ 2025 (14:19 IST)
ಬೆಂಗಳೂರು: ಬಹುಭಾಷಾ ನಟ ಪ್ರಕಾಶ್‌ ರಾಜ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಾತು ತಪ್ಪಿಸಿ ಮುಖ್ಯಮಂತ್ರಿ ಎಂದು ಕಾಲೆಳೆದಿದ್ದಾರೆ. 

ದೇವನಹಳ್ಳಿ ಹೋರಾಟದ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 15ರವರೆಗೆ ಕಾಲಾವಕಾಶ ಕೇಳಿದ್ದರು. ಆದರೆ, ಈ ನಡುವೆಯೇ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡುವ ಮೂಲಕ ನಂಬಿಕೆ ದ್ರೋಹ ಮಾಡಿದ್ದಾರೆ ಎಂದು ಮೈಸೂರಿನಲ್ಲಿ ಟೀಕೆ ಮಾಡಿದರು. 

ದೇವನಹಳ್ಳಿಯಲ್ಲಿ ರೈತರ ಜಮೀನು ಕಿತ್ತುಕೊಂಡು ಅಲ್ಲಿ 1700 ಎಕರೆಯಲ್ಲಿ ಡಿಫೆನ್ಸ್ ಕಾರಿಡಾರ್ ಸ್ಥಾಪನೆಗೆ ರಾಜ್ಯ ಸರ್ಕಾರ ಈಗ ಕೇಂದ್ರದ ಅನುಮತಿ ಕೇಳಿದೆ. ಕಾರಿಡಾರ್‌ಗೆ ಏಕೆ ಇಷ್ಟು ಜಾಗ ಬೇಕು ಎಂಬುದನ್ನು ಅವರು ನಕ್ಷೆ ಸಮೇತ ವಿವರಿಸಲಿ ಎಂದು ಪ್ರಕಾಶ್‌ರಾಜ್‌ ಸವಾಲು ಹಾಕಿದರು.

ಕಾರಿಡಾರ್‌ಗೆ ಕೇವಲ 100 ಎಕರೆ ಬಳಸಿ ಉಳಿದ ಜಮೀನಿನಲ್ಲಿ ಐಷಾರಾಮಿ ಹೋಟೆಲ್ ಕಟ್ಟುತ್ತಾರೆ. ಅಲ್ಲಿ ನಮ್ಮ ರೈತರು ಕೂಲಿಯಾಳು ಗಳಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಯಾರೋ‌ ಮೂವರು ರೈತರನ್ನು ಮಧ್ಯ ಕರೆ ತಂದು ಚಳವಳಿ ಒಡೆಯುವ ಪ್ರಯತ್ನ ಸರ್ಕಾರ ಮಾಡುತ್ತಿದೆ.‌ ಹಳ್ಳಿಗಳಿಗೆ ಪುಡಾರಿಗಳನ್ನು ಕಳುಹಿಸಿ ಹೆದರಿಸುತ್ತಿದೆ. ಹಸಿರು ವಲಯ ಮಾಡುತ್ತೇವೆ ಎಂಬ ನಾಟಕ ಆಡಿ ಜನರನ್ನು ಹೆದರಿಸುತ್ತಿದೆ ಎಂದು ಆರೋಪಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಜಾತಿಗಣತಿ ಹೆಸರಿನಲ್ಲಿ ಸ್ಟಿಕ್ಕರ್ ಅಂಟಿಸಲು 25 ಲಕ್ಷ ರೂ. ಪೋಲು: ಆರ್ ಅಶೋಕ್ ಕಿಡಿ