ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ನಂಬಿಕೆ ದ್ರೋಹ: ಬಹುಭಾಷಾ ನಟ ಪ್ರಕಾಶ್‌ ರಾಜ್ ವಾಗ್ದಾಳಿ

Sampriya
ಶುಕ್ರವಾರ, 11 ಜುಲೈ 2025 (14:19 IST)
ಬೆಂಗಳೂರು: ಬಹುಭಾಷಾ ನಟ ಪ್ರಕಾಶ್‌ ರಾಜ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಾತು ತಪ್ಪಿಸಿ ಮುಖ್ಯಮಂತ್ರಿ ಎಂದು ಕಾಲೆಳೆದಿದ್ದಾರೆ. 

ದೇವನಹಳ್ಳಿ ಹೋರಾಟದ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 15ರವರೆಗೆ ಕಾಲಾವಕಾಶ ಕೇಳಿದ್ದರು. ಆದರೆ, ಈ ನಡುವೆಯೇ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡುವ ಮೂಲಕ ನಂಬಿಕೆ ದ್ರೋಹ ಮಾಡಿದ್ದಾರೆ ಎಂದು ಮೈಸೂರಿನಲ್ಲಿ ಟೀಕೆ ಮಾಡಿದರು. 

ದೇವನಹಳ್ಳಿಯಲ್ಲಿ ರೈತರ ಜಮೀನು ಕಿತ್ತುಕೊಂಡು ಅಲ್ಲಿ 1700 ಎಕರೆಯಲ್ಲಿ ಡಿಫೆನ್ಸ್ ಕಾರಿಡಾರ್ ಸ್ಥಾಪನೆಗೆ ರಾಜ್ಯ ಸರ್ಕಾರ ಈಗ ಕೇಂದ್ರದ ಅನುಮತಿ ಕೇಳಿದೆ. ಕಾರಿಡಾರ್‌ಗೆ ಏಕೆ ಇಷ್ಟು ಜಾಗ ಬೇಕು ಎಂಬುದನ್ನು ಅವರು ನಕ್ಷೆ ಸಮೇತ ವಿವರಿಸಲಿ ಎಂದು ಪ್ರಕಾಶ್‌ರಾಜ್‌ ಸವಾಲು ಹಾಕಿದರು.

ಕಾರಿಡಾರ್‌ಗೆ ಕೇವಲ 100 ಎಕರೆ ಬಳಸಿ ಉಳಿದ ಜಮೀನಿನಲ್ಲಿ ಐಷಾರಾಮಿ ಹೋಟೆಲ್ ಕಟ್ಟುತ್ತಾರೆ. ಅಲ್ಲಿ ನಮ್ಮ ರೈತರು ಕೂಲಿಯಾಳು ಗಳಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಯಾರೋ‌ ಮೂವರು ರೈತರನ್ನು ಮಧ್ಯ ಕರೆ ತಂದು ಚಳವಳಿ ಒಡೆಯುವ ಪ್ರಯತ್ನ ಸರ್ಕಾರ ಮಾಡುತ್ತಿದೆ.‌ ಹಳ್ಳಿಗಳಿಗೆ ಪುಡಾರಿಗಳನ್ನು ಕಳುಹಿಸಿ ಹೆದರಿಸುತ್ತಿದೆ. ಹಸಿರು ವಲಯ ಮಾಡುತ್ತೇವೆ ಎಂಬ ನಾಟಕ ಆಡಿ ಜನರನ್ನು ಹೆದರಿಸುತ್ತಿದೆ ಎಂದು ಆರೋಪಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments