ನೀರು ಬೆರೆಸದೆ 5 ಬಾಟಲ್ ಮದ್ಯ ಸೇವಿಸುವುದಾಗಿ ಬೆಟ್ಟಿಂಗ್: ಮದುವೆಯಾದ ವರ್ಷದೊಳಗೆ ಪ್ರಾಣ ಕಳೆದುಕೊಂಡ ಯುವಕ

Sampriya
ಸೋಮವಾರ, 28 ಏಪ್ರಿಲ್ 2025 (16:36 IST)
ಕೋಲಾರ: ಹಣದ ಆಸೆಗಾಗಿ ಮದ್ಯ ಸೇವನೆ ಮಾಡಿ ಬೆಟ್ಟಿಂಗ್ ಕಟ್ಟಿ ಪ್ರಾಣ ಕಳೆದುಕೊಂಡ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕು ಪೂಜಾರಹಳ್ಳಿ ಗ್ರಾಮದಲ್ಲಿ ನಡೆದಿದೆ. ಮದುವೆಯಾದ ವರ್ಷದೊಳಗೆ ಬೆಟ್ಟಿಂಗ್ ಚಟಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾನೆ.

ಮೃತ ಯುವಕನನ್ನು ಕಾರ್ತಿಕ್ ಎಂದು ಗುರುತಿಸಲಾಗಿದೆ. ₹10 ಸಾವಿರ  ಹಣಕ್ಕೆ ಆಸೆ ಬಿದ್ದು, ಒಂದೇ ಸಮಯದಲ್ಲಿ ಒಂದು ಹನಿಯೂ ನೀರು ಬೆರೆಸದೆ ಐದು ಬಾಟಲಿ ಮದ್ಯವನ್ನು ಸೇವಿಸಿದ್ದಾನೆ. ಆದ್ರೆ, ಮದ್ಯ ದೇಹದೊಳಗೆ ಸೇರಿಕೊಳ್ಳುತ್ತಿದ್ದಂತೆಯೇ ಕಾರ್ತಿಕ್ ಆರೋಗ್ಯದಲ್ಲಿ ಏರುಪೇರಾಗಿ ಮೃತಪಟ್ಟಿದ್ದಾನೆ.

ಇದೇ ಪೂಜಾರಹಳ್ಳಿ ಗ್ರಾಮದ ವೆಂಕಟರಡ್ಡಿ, ಸುಬ್ರಮಣಿ ಮತ್ತು ಇತರೆ ಮೂವರೊಂದಿಗೆ ಬೆಟ್ಟಿಂಗ್ ಕಟ್ಟಿದ್ದ. ಐದು ಬಾಟಲ್ ಮದ್ಯಕ್ಕೆ ಒಂದು ಹನಿ ನೀರನ್ನೂ ಬೆರೆಸದೇ ಕುಡಿಯುವುದಾಗಿ ಎದುರಾಳಿ ವ್ಯಕ್ತಿಯೊಂದಿಗೆ 10 ಸಾವಿರ ರೂ. ಹಣಕ್ಕೆ ಬಾಜಿ ಕಟ್ಟಿದ್ದ.

ಈ ವೇಳೆ ನೀನು 5 ಬಾಟಲಿ ಎಣ್ಣೆಯನ್ನು ರಾ ಹೊಡೆದರೆ (ನೀರು ಬೆರೆಸದೆ) ನಾನೊಬ್ಬನೇ 10 ಸಾವಿರ ರೂ. ಕೊಡುವುದಾಗಿ ವೆಂಕಟರೆಡ್ಡಿ ಸವಾಲು ಹಾಕಿದ್ದ. ಮದ್ಯ ಸೇವನೆಯಲ್ಲಿ ನಾನೆಂದಿಗೂ ಸೋತಿಲ್ಲವೆಂದು ಕಾರ್ತಿಕ್ ಜಿದ್ದಿಗೆ ಬಿದ್ದು ಸ್ವಲ್ಪನೂ ನೀರು ಹಾಕದೆ ಮದ್ಯ ಸೇವನೆ ಮಾಡಿದ್ದೇ, ಇದೀಗ ಪ್ರಾಣವನ್ನು ಕಳೆದುಕೊಳ್ಳುವಂತೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ನವೆಂಬರ್ ಕ್ರಾಂತಿ ಬಿಸಿ ನಡುವೆ ಹೊಸ ಬಾಂಬ್ ಸಿಡಿಸಿದ ಎಚ್ ಡಿ ಕುಮಾರಸ್ವಾಮಿ

ORS ಬ್ರ್ಯಾಂಡ್‌ನ ಪೇಯಗಳನ್ನು ಹಿಂಪಡೆಯಲು FSSAI ಸೂಚನೆ

ಡಿಕೆ ಬ್ರದರ್ಸ್ ತಲೆ ಮೇಲೆ ಕೈಯಿಟ್ಟು ಆಣೆ ಮಾಡಿದ್ರು ಸಿದ್ದರಾಮಯ್ಯ: ಎಚ್ ವಿಶ್ವನಾಥ್ ಹೊಸ ಬಾಂಬ್

ಎಟಿಎಂ ವ್ಯಾನ್‌ನ 7.11 ಕೋಟಿ ದರೋಡೆ ಪ್ರಕರಣ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments