ಬಿಜೆಪಿಯ ಭಾಗ್ಯಲಕ್ಷ್ಮಿ ಯೋಜನೆಯಲ್ಲೂ ಹಗರಣದ ಆರೋಪ

Krishnaveni K
ಶುಕ್ರವಾರ, 6 ಸೆಪ್ಟಂಬರ್ 2024 (16:57 IST)
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಡಾ, ವಾಲ್ಮೀಕಿ ಹಗರಣ ಆರೋಪ ಮಾಡುತ್ತಿರುವ ಬಿಜೆಪಿ ವಿರುದ್ಧ ಈಗ ಕೊವಿಡ್ ಹಗರಣ, ಭಾಗ್ಯಲಕ್ಷ್ಮಿ ಹಗರಣದ ಆರೋಪ ಕೇಳಿಬರುತ್ತಿದೆ.

ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದ ಜನಪ್ರಿಯ ಯೋಜನೆ ಭಾಗ್ಯಲಕ್ಷ್ಮಿ ಯೋಜನೆ. ಈ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಉಚಿತ ಸೀರೆ ಹಂಚಿಕೆ ಮಾಡಲು 23 ಕೋಟಿ ರೂ ಹಗರಣ ನಡೆದಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಮಾಧ್ಯಮ ಮುಖ್ಯಸ್ಥ ರಮೇಶ್ ಬಾಬು ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. 2011 ರಲ್ಲಿ ಭಾಗ್ಯಲಕ್ಷ್ಮಿ ಯೋಜನೆಯಡಿಯಲ್ಲಿ ಉಚಿತ ಸೀರೆ ಹಂಚಿಕೆ ಮಾಡಲು 23 ಕೋಟಿ ರೂ ಹಗರಣ ನಡೆದಿದೆ ಎಂದು ಆರೋಪಿಸಿದ್ದಾರೆ. 100 ರೂ. ಬೆಲೆಯ ಸೀರೆಯನ್ನು ಹೆಚ್ಚಿನ ಬೆಲೆಗೆ ಖರೀದಿ ಮಾಡಲಾಗಿತ್ತು ಎಂದು ಅವರು ಆರೋಪಿಸಿದ್ದಾರೆ.

ಇಂತಹ 10 ಲಕ್ಷ ಸೀರೆಗಳನ್ನು ಹೆಚ್ಚು ಬೆಲೆ ನೀಡಿ ಖರೀದಿ ಮಾಡಲಾಗಿತ್ತು. ಈ ಬಗ್ಗೆ ತನಿಖೆ ನಡೆಸಲು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಲಾಗಿದೆ ಎಂದು ರಮೇಶ್ ಬಾಬು ಹೇಳಿದ್ದಾರೆ. ಕಾಂಗ್ರೆಸ್ ವಿರುದ್ಧ ಮುಡಾ, ವಾಲ್ಮೀಕಿ ಹಗರಣದ ಆರೋಪ ಮಾಡುತ್ತಿರುವ ಬಿಜೆಪಿಗೆ ಈ ಹಗರಣ ಮತ್ತೊಂದು ತಲೆನೋವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳೆದ ವರ್ಷ ಲಂಡನ್‌ನ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾದ ಸೌದಿ ಯುವರಾಜಕುಮಾರನ ಸಾವಿಗೆ ಕಾರಣ ಏನ್ ಗೊತ್ತಾ

ವಿದ್ಯಾರ್ಥಿಗಳ ಮೇಲೆ ಪೊಲೀಸರ ಅತಿಯಾದ ಬಲಪ್ರಯೋಗ, ಜು.27ರಂದು ವಿಚಾರಣೆಗೆ ಸುಪ್ರೀಂ ಅಸ್ತು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ ಕಾದಿದೆ, ಏನ್ ವಿಷಯ ಗೊತ್ತಾ

ಹುದ್ದೆಯಿಂದ ಕೆಳಗಿಳಿಯುವುದು ಅತ್ಯಂತ ಸುಲಭ, ಆದರೆ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಗ್ಗೆ ಸರ್ಕಾರ ಮೂಲಗಳಿಂದ ಮಹತ್ವದ ಸುಳಿವು

ಬೆಳ್ತಂಗಡಿ ಸುಮಂತ್ ಸಾವು ಪ್ರಕರಣ: ಶಂಕಿತ ಆರೋಪಿಗಳ ಬ್ರೈನ್ ಮಾಪಿಂಗ್‌ಗೆ ಕೋರ್ಟ್‌ ಗ್ರೀನ್‌ ಸಿಗ್ನಲ್

ಮುಂದಿನ ಸುದ್ದಿ
Show comments