ಜೈಪುರ : ಭಾರತೀಯ ರಿಸರ್ವ್ ಬ್ಯಾಂಕ್ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರು ಇಂದು ಬೆಳಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
									
			
			 
 			
 
 			
					
			        							
								
																	ರಾಜಸ್ಥಾನದ ಸವಾಯಿ ಮಾಧೋಪುರದಿಂದ ಕಾಂಗ್ರೆಸ್ನ ಪಾದಯಾತ್ರೆ ಪುನಾರಂಭವಾದ ಪಾದಯಾತ್ರೆಯಲ್ಲಿ ರಾಜನ್ ಮತ್ತು ರಾಹುಲ್ ಗಾಂಧಿ ಚರ್ಚೆ ನಡೆಸುತ್ತಿರುವ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ.
									
										
								
																	ಇಂದಿಗೆ ರಾಜಸ್ಥಾನದಲ್ಲಿ ಭಾರತ್ ಜೋಡೋ ಯಾತ್ರೆ ಪ್ರಾರಂಭವಾಗಿ 10ನೇ ದಿನವಾಗಿದ್ದು, ಇಂದು ಬಮನ್ವಾಸ್ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಭಡೋತಿ ಗ್ರಾಮದಿಂದ ಯಾತ್ರೆ ಪುನಾರಂಭವಾಯಿತು. ಇಂದು ಯಾತ್ರೆ 25 ಕಿ.ಮೀ ದೂರ ಕ್ರಮಿಸಲಿದೆ. 
									
											
							                     
							
							
			        							
								
																	ಸೆ. 7ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭವಾದ ಭಾರತ್ ಜೋಡೋ ಯಾತ್ರೆಯು ಇದುವರೆಗೆ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ಮತ್ತು ಮಧ್ಯಪ್ರದೇಶದಲ್ಲಿ ಸಂಚರಿಸಿದ್ದು, ಇದೀಗ ರಾಜಸ್ಥಾನದಲ್ಲಿ ಮುಂದುವರಿಸಿದೆ.