ಸಾವಿರ ಕಿ.ಲೋ.ಕ್ರಮಿಸಿದ ಭಾರತ್‌ ಜೋಡೋ

Webdunia
ಶನಿವಾರ, 15 ಅಕ್ಟೋಬರ್ 2022 (17:46 IST)
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆಯು ಇಂದಿಗೆ 1,000 ಕಿಲೋಮೀಟರ್‌ಗಳನ್ನು ಕ್ರಮಿಸುವ ಮೂಲಕ ಮೈಲಿಗಲ್ಲನ್ನು ತಲುಪಿದೆ. ಪಾದಯಾತ್ರೆ ಬಳ್ಳಾರಿ ತಲುಪುವ ಮೂಲಕ 1000 ಕಿಮೀ ಕ್ರಮಿಸಿದೆ. 3,500 ಕಿಲೋಮೀಟರ್ ನಡೆಯಲಿರುವ ಯಾತ್ರೆಯು ಕಾಂಗ್ರೆಸ್ ಪಕ್ಷ ಮತ್ತು ಇಡೀ ದೇಶಕ್ಕೆ ಐತಿಹಾಸಿಕ ಘಟನೆಯಾಗಿದೆ. ಬಳ್ಳಾರಿಯಲ್ಲಿ ಕಾಂಗ್ರೆಸ್ ಪಕ್ಷ ಬೃಹತ್ ಸಮಾವೇಶ ಆಯೋಜಿಸಿದ್ದೆ. ಇದೊಂದು ರಾಜಕೀಯೇತರ ಯಾತ್ರೆ ಎಂದು ಹೇಳಿದ್ದರು. ಆದರೂ ರಾಜಕೀಯದಲ್ಲಿ ಯಾರೂ ಸಂತರಲ್ಲ, ಈ ಯಾತ್ರೆಯಿಂದ ಕಾಂಗ್ರೆಸ್ ಗೆ ಸಂಪೂರ್ಣ ಲಾಭ ಸಿಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 3,570 ಕಿಲೋಮೀಟರ್‌ಗಳ ಪಾದಯಾತ್ರೆಯು ಕಾಂಗ್ರೆಸ್ ನಾಯಕರ ನಡುವಿನ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿ ಮತ್ತು ದೊಡ್ಡ ಮಟ್ಟದಲ್ಲಿ ಜನರನ್ನು ಸೆಳೆಯುವ ಮೂಲಕ ಪಕ್ಷಕ್ಕೆ ಶಕ್ತಿ ತುಂಬಿದೆ.
 2024 ರ ಲೋಕಸಭೆ ಮತ್ತು 2023 ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಪಕ್ಷದ ನೆಲೆಯನ್ನು ಬಲಪಡಿಸುವ ಪ್ರಯತ್ನವಾಗಿ ಅನೇಕ ಕಾಂಗ್ರೆಸ್ ನಾಯಕರು ಯಾತ್ರೆಯ ಮೇಲೆ ವಿಶ್ವಾಸವಿರಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ವಿರುದ್ಧ ಹೋರಾಡಲು ಯಾತ್ರೆ ಸರಿಯಾದ ಸಮಯದಲ್ಲಿ ಬಂದಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments