ಭಾರತ ಜೋಡೋ ಯಾತ್ರೆಯಲ್ಲ,ಭಾರತ ಬಿಟ್ಟು ಓಡೋ ಯಾತ್ರೆ'- ನಳಿನ್ ಕುಮಾರ್ ಕಟೀಲ್ ವ್ಯಂಗ್ಯ

Webdunia
ಬುಧವಾರ, 5 ಅಕ್ಟೋಬರ್ 2022 (16:31 IST)
ಕಾಂಗ್ರೆಸ್ ಪಕ್ಷದ್ದು ಭಾರತ ಜೋಡೋ ಯಾತ್ರೆಯಲ್ಲ; ಅದು 'ಭಾರತ ಬಿಟ್ಟು ಓಡೋ ಯಾತ್ರೆ'ಯಾಗಿ ಪರಿವರ್ತನೆ ಹೊಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.
 
ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್ ತೊರೆದು ಹೊಸ ಪಕ್ಷ ಸ್ಥಾಪಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ನಾಯಕತ್ವದ ವಿರುದ್ಧ ಕೋಪದಿಂದಿರುವ ನಾಯಕರು ಜೊತೆಗೂಡಿ ಜಿ-23 ಗುಂಪು ರಚಿಸಿದ್ದರು. ಕಾಂಗ್ರೆಸ್ ಪಕ್ಷದೊಳಗೆ ಆಂತರಿಕ ಪ್ರಜಾಪ್ರಭುತ್ವ ಇಲ್ಲ; ಅದು ಚೇತರಿಕೆ ಕಾಣಲಾರದು ಎಂಬುದನ್ನು ಮನಗಂಡ ನಾಯಕರನೇಕರು ಒಬ್ಬೊಬ್ಬರಾಗಿ ಈಗಾಗಲೇ ಆ ಪಕ್ಷಕ್ಕೆ ವಿದಾಯ ಹೇಳಿದ್ದಾರೆ. ಸ್ವಜನಪಕ್ಷಪಾತ, ಕುಟುಂಬ ರಾಜಕಾರಣದ ಮೂಲಕ ಗುರುತಿಸಿಕೊಂಡ ಕಾಂಗ್ರೆಸ್ ಪಕ್ಷ ಮುಂದಿನ ದಿನಗಳಲ್ಲಿ ಪಕ್ಷದೊಳಗಿನ ಭಿನ್ನಮತ ಹಾಗೂ ಸಮರ್ಥ ನಾಯಕತ್ವದ ಕೊರತೆಯಿಂದ ನೆಲಕಚ್ಚಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
 
ಕಾಂಗ್ರೆಸ್ ತೊರೆಯುವ ನಾಯಕರನ್ನು ಒಂದೆಡೆ ಸೇರಿಸಿ ಕಾಂಗ್ರೆಸ್ ಜೋಡೋ ಮಾಡಬೇಕಿದ್ದ ರಾಹುಲ್ ಗಾಂಧಿಯವರು ತಮ್ಮ ಮುತ್ತಾತ ನೆಹರೂ ಅವರು ದೇಶವನ್ನು ಇಬ್ಭಾಗ ಮಾಡಿದ್ದನ್ನು ಮರೆತಿದ್ದಾರೆ. ಇದು ಜಾಣಮರೆವಲ್ಲದೆ ಮತ್ತೇನಲ್ಲ. ಆದರೆ, 130 ಕೋಟಿ ಜನರ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜಿ ಅವರು ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿಯನ್ನು ರದ್ದು ಮಾಡಿ ದೇಶ ಜೋಡಿಸುವ ಕಾರ್ಯ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಕ್ರೋಚ್‌ಗಳ ಬೇಡಿಕೆಗಳಿಗೆ ಜಗ್ಗಿದ ಕೇಂದ್ರ ಸರ್ಕಾರ: ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ

ಹುಷಾರ್... ರಸ್ತೆಯಲ್ಲಿ ಬಿದ್ದ ಹಣ ಹೆಕ್ಕುವ ಮೊದಲು ಈ ವಿಡಿಯೋ ತಪ್ಪದೇ ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನೀಟ್ ಪ್ರತಿಭಟನೆಯ ನೇತೃತ್ವ ವಹಿಸಿರುವ ಅಭಿಜಿತ್ ದಿಪ್ಕೆ ಪರಿಸ್ಥಿತಿ ಏನಾಗಿದೆ ಗೊತ್ತಾ Video

ಎಷ್ಟೂಂತ ಸಹಿಸೋದು.. ತನಗೆ ಒಂದೇ ಸಮನೆ ಹೊಡೆಯುತ್ತಿದ್ದ ಮಹಿಳೆ ಮೇಲೆ ಈ ವ್ಯಕ್ತಿ ಏನು ಮಾಡಿದ್ರು ನೋಡಿ Video

ಮುಂದಿನ ಸುದ್ದಿ
Show comments