Select Your Language

Notifications

webdunia
webdunia
webdunia
webdunia

ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿಗೆ ಶಿಫಾರಸ್ಸು: ಜಿ.ಪರಮೇಶ್ವರ್

ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿಗೆ ಶಿಫಾರಸ್ಸು: ಜಿ.ಪರಮೇಶ್ವರ್
ಬೆಂಗಳೂರು , ಗುರುವಾರ, 23 ಮಾರ್ಚ್ 2017 (20:01 IST)
ತುಮಕೂರಿನ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಶಿಫಾರಸ್ಸು ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.
 
ನಡೆದಾಡುವ ದೇವರು ಎಂದೇ ಖ್ಯಾತರಾದ ಶತಾಯುಷಿ ಸಿದ್ದಗಂಗಾ ಮಠಧ ಶಿವಕುಮಾರ್ ಸ್ವಾಮಿಗಳಿಗೆ ಭಾರತ ರತ್ನ ಪ್ರಶಸ್ತಿಗೆ ಶಿಫಾರಸ್ಸು ಮಾಡುವಂತೆ ಕೋರಿದ್ದಾರೆ.
 
ಕರ್ನಾಟಕ ರತ್ನ ಡಾ. ಶ್ರೀ.ಶಿವಕುಮಾರ ಸ್ವಾಮಿಗಳು ತುಮಕೂರು ಜಿಲ್ಲೆಯ ಸಿದ್ದಗಂಗಾ ಮಠದ ಮಠಾಧಿಪತಿಗಳು. ಇವರು ತ್ರಿವಿಧ (ಅನ್ನ, ಅಕ್ಷರ, ಜ್ಞಾನ) ದಾಸೋಹಿ. ೧2ನೇ ಶತಮಾನದ ಯುಗಪುರುಷ ಕ್ರಾಂತಿಕಾರಿ ಬಸವಣ್ಣನವರ "ಕಾಯಕವೇ ಕೈಲಾಸ" ಮತ್ತು ನಿತ್ಯ ದಾಸೋಹ ತತ್ವದ ಕೈಂಕರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಶ್ರೀಗಳು. ಮಾರ್ಚ್ 3, 193೦ರಲ್ಲಿ ಇವರು ಶ್ರೀಮಠದ ಜವಾಬ್ದಾರಿಯನ್ನು ಹೊತ್ತು ಅಂದಿನಿಂದ ನಿರಂತರವಾಗಿ ಮಠ, ಯಾವುದೋ ಒಂದು ಧರ್ಮಕ್ಕೆ ಸ್ಥೀಮಿತವಾಗದೆ ಎಲ್ಲ ಧರ್ಮಗಳ ಮತ್ತು ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿದ್ದಾರೆ.
 
ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿರುವ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿರುವರು. ಇವರು ಸಮಾಜದ ಎಷ್ಟೋ ಗಣ್ಯರ ಬಾಲ್ಯ ಜೀವನಗಳ ಪರಿವರ್ತನೆಗೆ ಕಾರಣವಾಗಿದ್ದಾರೆ. ತಮ್ಮ ಮಠದಲ್ಲಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಆಶ್ರಯವನಿತ್ತು ತ್ರಿವಿಧ ದಾಸೋಹವನ್ನು ಸತತವಾಗಿ ನಡೆಸುತ್ತಾ ಬಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಭರವಸೆ: ಅಂಗನವಾಡಿ ಕಾರ್ಯಕರ್ತೆಯರ ಮುಷ್ಕರ ವಾಪಸ್