Select Your Language

Notifications

webdunia
webdunia
webdunia
webdunia

ಅಡ್ವಾಣಿಗೆ ಭಾರತ ರತ್ನ - ವಿಜಯೇಂದ್ರ ಸಂಭ್ರಮ

ವಿಜಯೇಂದ್ರ

geetha

bangalore , ಶನಿವಾರ, 3 ಫೆಬ್ರವರಿ 2024 (16:00 IST)
ಬೆಂಗಳೂರು :ಎಲ್.ಕೆ.ಅಡ್ವಾಣಿಯವರಿಗೆ ‘ಭಾರತ ರತ್ನ’ ಪ್ರಶಸ್ತಿ ಘೋಷಿಸಿದ ಕೇಂದ್ರ ಬಿಜೆಪಿ ಸರಕಾರದ ಕ್ರಮವನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಸ್ವಾಗತಿಸಿದ್ದಾರೆ. ದೊಂದು ಉತ್ತಮ ನಿರ್ಧಾರ. ಅರ್ಹತೆಯನ್ನು ಗುರುತಿಸಿ ಈ ಆಯ್ಕೆ ಮಾಡಲಾಗಿದೆ ಎಂದರು.ಅಡ್ವಾಣಿ ಅವರು ಭಾರತದ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸಿದ್ದಾರೆ. ಕೇಂದ್ರ ಗೃಹ ಸಚಿವ ಮತ್ತು ಮಾಹಿತಿ- ತಂತ್ರಜ್ಞಾನ ಸಚಿವರಾಗಿ ಅವರು ಸಮರ್ಥವಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಸಂಸದೀಯ ನಡೆಯೂ ಆದರ್ಶಪ್ರಾಯವಾಗಿವೆ ಎಂದು ವಿಜಯೇಂದ್ರ ಅವರು ಮೆಚ್ಚುಗೆ ಸೂಚಿಸಿದ್ದಾರೆ.

ಅಡ್ವಾಣಿ ಅವರು ಭಾರತದ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸಿದ್ದಾರೆ. ಕೇಂದ್ರ ಗೃಹ ಸಚಿವ ಮತ್ತು ಮಾಹಿತಿ- ತಂತ್ರಜ್ಞಾನ ಸಚಿವರಾಗಿ ಅವರು ಸಮರ್ಥವಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಸಂಸದೀಯ ನಡೆಯೂ ಆದರ್ಶಪ್ರಾಯವಾಗಿವೆ ಎಂದು ವಿಜಯೇಂದ್ರ ಅವರು ಮೆಚ್ಚುಗೆ ಸೂಚಿಸಿದ್ದಾರೆ.
ಇದೇ ವೇಳೆ ಮಾಜಿ ಸಿಎಂ ಯಡಿಯೂರಪ್ಪ ಅವರೂ ಸಹ ಮಾತನಾಡಿ, ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ಧ್ವಂಸಗೊಳಿಸುವ ಸಂದರ್ಭದಲ್ಲಿ ಲಾಲ್‌ ಕೃಷ್ಣ ಅಡ್ವಾನಿಯವರು ಸಹ ಭಾಗವಹಿಸಿದ್ದರು. ಅದರ ಪರಿಣಾಮದಿಂದ ಇಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿರುವುದು ಸಂತಸ ತಂದಿದೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಕೈಕೊಟ್ಟ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸರ್ವರ್-ವಿದ್ಯಾರ್ಥಿಗಳು ಅತಂತ್ರ