ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ-ಎಸ್.ಎಂ.ಕೃಷ್ಣ ಒತ್ತಾಯ

Webdunia
ಶನಿವಾರ, 20 ಜನವರಿ 2018 (15:47 IST)
ಮಂಡ್ಯ: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗೆ 'ಭಾರತ ರತ್ನ' ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ಅವರು ಪ್ರಧಾನಿಗೆ ಪತ್ರ ಬರೆದಿದ್ದಾರೆ. ಲಕ್ಷಾಂತರ ಜನರು ಶಿವಕುಮಾರ ಸ್ವಾಮೀಜಿಯವರನ್ನು ‘ನಡೆದಾಡುವ ದೇವರು’ ಎಂದೇ ಆರಾಧಿಸುತ್ತಾರೆ. ಅವರು ಭಾರತ ರತ್ನಕ್ಕೆ ಭಾಜನರಾಗುವುದನ್ನು ಜನ ಎದುರು ನೋಡುತ್ತಿದ್ದಾರೆ. ಕಾಯಕಯೋಗಿ ಆಗಿರುವ ಅವರಿಗೆ ಕೇಂದ್ರ ಸರ್ಕಾರ ಭಾರತರತ್ನ ಪುರಸ್ಕಾರ ನೀಡಿ ಗೌರವಿಸಬೇಕು’ ಎಂದು ಮನವಿ ಮಾಡಿಕೊಂಡಿದ್ದಾರೆ.


‘111 ವರ್ಷದ ಶಿವಕುಮಾರ ಸ್ವಾಮೀಜಿ ಅವರು 8 ದಶಕಗಳಿಂದ ಸಮಾಜ ಸೇವೆಯಲ್ಲಿ ತೊಡಗಿದ್ದಾರೆ. ಸಮಾಜದಲ್ಲಿನ ಕೆಟ್ಟ ಆಚರಣೆ, ಮೂಢನಂಬಿಕೆ ಮತ್ತು ತಾರತಮ್ಯ ತೊಲಗಿಸಲು ಶ್ರಮಿಸಿದ್ದಾರೆ. ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.


ಸ್ವಾಮೀಜಿ ಅವರು ಮನುಕುಲಕ್ಕೆ ನೀಡಿದ ಸೇವೆಗೆ ಪ್ರತಿಯಾಗಿ ಮತ್ತು ಲಕ್ಷಾಂತರ ಭಕ್ತರ ನಿರೀಕ್ಷೆಯಂತೆ ‘ಭಾರತ ರತ್ನ’ವನ್ನು ಶಿವಕುಮಾರ ಸ್ವಾಮೀಜಿಗೆ ಪ್ರದಾನಿಸಬೇಕು. ಆ ಪುರಸ್ಕಾರಕ್ಕೆ ಅವರು ಅರ್ಹರಾಗಿದ್ದಾರೆ ಎಂದು ಎಸ್ .ಎಂ ಕೃಷ್ಣ ಅವರು ಪತ್ರದಲ್ಲಿ ಬರೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments