ಕಮಲ’ ಹಿಡಿದ ಭಾಸ್ಕರ್ ರಾವ್

Webdunia
ಬುಧವಾರ, 1 ಮಾರ್ಚ್ 2023 (15:08 IST)
ಎಎಪಿ ಸೇರಿ ಛಾಪು ಮೂಡಿಸಿದ್ದ ಸ್ವಯಂ ನಿವೃತ್ತಿ ಪಡೆದ ಐಪಿಎಸ್‌ ಅಧಿಕಾರಿ ಭಾಸ್ಕರ್​ ರಾವ್​​​​ ಎಎಪಿಗೆ ಗುಡ್‌ಬೈ ಹೇಳಿದ್ದಾರೆ. ಇಂದು ಭಾಸ್ಕರ್‌ ರಾವ್‌ ಬಿಜೆಪಿಗೆ ಸೇರಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಎಎಪಿ ತೊರೆದ ಭಾಸ್ಕರ್‌ ರಾವ್‌ ಅವರನ್ನು ಪಕ್ಷಕ್ಕೆ ಸ್ವಾಗತ ಮಾಡಿದ್ದಾರೆ. ಪಕ್ಷದ ಶಾಲು ಹಾಕಿ, ಧ್ವಜ ನೀಡಿ ಭಾಸ್ಕರ್ ರಾವ್ ಅವರನ್ನು ನಳಿನ್‌ ಕುಮಾರ್ ಕಟೀಲ್‌ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ಭಾಸ್ಕರ್‌ ರಾವ್‌ ಅವರ ಜೊತೆ ಅವರ ಬೆಂಬಲಿಗರು ಸಹ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಸೇರ್ಪಡೆ ಬಳಿಕ ಪ್ರತಿಕ್ರಿಯೆ ನೀಡಿದ ಭಾಸ್ಕರ್‌ ರಾವ್‌, ವಿಆರ್‌ಎಸ್‌ ತೆಗೆದುಕೊಂಡು ರಾಜಕೀಯ ಬದಲಾವಣೆಗೆ ಹೊರಟಿದ್ದೆ. ಆದರೆ, ಎಎಪಿ‌ ಕರ್ನಾಟಕದಲ್ಲಿ ಬೆಳೆಯುತ್ತಿಲ್ಲ. ಅವರ ಕಾರ್ಯವೈಖರಿ ಶೈಲಿಯಿಂದ ಬೆಳವಣಿಗೆ ಸಾಧ್ಯವಾಗುತ್ತಿಲ್ಲ. ಈಗ ನಾನು ಸನಾತನ ಧರ್ಮದ ಪಕ್ಷ, ರಾಷ್ಟ್ರೀಯತೆಯನ್ನ ಅಳವಾಗಿ ಮೈಗೂಡಿಸಿಕೊಂಡಿರುವ ಪಕ್ಷ ಬಿಜೆಪಿ ಸೇರ್ಪಡೆಯಾಗಿದ್ದೇನೆ. ಬಾಲ್ಯದಿಂದಲೂ ಸನಾತನ ಧರ್ಮ, ರಾಷ್ಟ್ರೀಯತೆಗೆ ನಾನು ಬದ್ಧವಾಗಿದ್ದೇನೆ. ಹಾಗಾಗಿ ನಾನು ಬಿಜೆಪಿ ಸೇರ್ಪಡೆ ಆಗಿದ್ದೇನೆ ಎಂದು ಭಾಸ್ಕರ್‌ ರಾವ್‌ ಹೇಳಿಕೆ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ, ಅಮಿತ್ ಶಾನ ಇಲ್ಲೇ ಹೂತು ಹಾಕ್ತೀವಿ: ಜೆಎನ್ ಯುವಿನಲ್ಲಿ ವಿದ್ಯಾರ್ಥಿಗಳ ಘೋಷಣೆ video

ತಿರುಪ್ಪರನ್ ಕುಂದ್ರಂ ಬೆಟ್ಟದ ಮೇಲೆ ದೀಪ ಬೆಳಗಲು ಹೈಕೋರ್ಟ್ ಅನುಮತಿ: ಡಿಎಂಕೆಗೆ ದೊಡ್ಡ ಮುಖಭಂಗ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ ಬೆಲೆಯಲ್ಲಿ ಇಂದು ಮತ್ತೆ ಏರಿಕೆ

ನಮ್ ಮನೆ ಮುಂದೆ ಪಲಾವ್, ನಾಟಿ ಕೋಳಿ ಹಂಚಿದ್ದು ಯಾರು ಗೊತ್ತಿಲ್ಲರೀ... ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments