Publish Date: Mon, 04 Apr 2022 (07:03 IST)
Updated Date: Mon, 04 Apr 2022 (07:04 IST)
ಬೆಂಗಳೂರು : ರೈಲ್ವೆ ಪೊಲೀಸ್ ಎಡಿಜಿಪಿ ಹುದ್ದೆಗೆ ರಾಜೀನಾಮೆ ನೀಡಿದ್ದ ಹಿರಿಯ ಐಪಿಎಸ್ ಅಧಿಕಾರಿ ಬಿ. ಭಾಸ್ಕರ್ ರಾವ್ ಸೋಮವಾರ ಆಮ್ ಆದ್ಮಿ ಪಕ್ಷವನ್ನು ಸೇರಲಿದ್ದಾರೆ.
ನವದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಎಎಪಿ ಕಚೇರಿಯಲ್ಲಿ ಸೋಮವಾರ ಮಧ್ಯಾಹ್ನ ಅವರು ಆಪ್ ಪಕ್ಷದ ಧ್ವಜ ಹಿಡಿಯಲಿದ್ದಾರೆ.
ಈ ಸಂದರ್ಭದಲ್ಲಿ ಮನೀಶ್ ಸಿಸೋಡಿಯಾ ಮತ್ತಿತರ ನಾಯಕರು ಉಪಸ್ಥಿತರಿರುವ ಸಾಧ್ಯತೆಯಿದೆ.
ರೈಲ್ವೆ ಪೊಲೀಸ್ ಎಡಿಜಿಪಿ ಹುದ್ದೆಗೆ ಸ್ವಯಂ ನಿವೃತ್ತಿ ಕೋರಿ ಸೆಪ್ಟೆಂಬರ್ 2021ರಲ್ಲಿ ಭಾಸ್ಕರ್ ರಾವ್ ರಾಜೀನಾಮೆ ಸಲ್ಲಿಸಿದ್ದರು. ನಿರ್ಧಾರ ಪುನರ್ ಪರಿಶೀಲನೆಗೆ ಕೇಂದ್ರ ಗೃಹ ಸಚಿವಾಲಯ ಅವಕಾಶ ನೀಡಿತ್ತು.