Webdunia - Bharat's app for daily news and videos

Install App

ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಸಾಕ್ಷಿಗಳ ವಿಚಾರಣೆ

Webdunia
ಸೋಮವಾರ, 2 ಜುಲೈ 2018 (18:26 IST)
ರಾಜ್ಯವನ್ನೇ ಬೆಚ್ಚಿ ಬೀಳಿಸಿ, ಬಾರಿ ಸುದ್ದಿ ಮಾಡಿದ್ದ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಸಾಕ್ಷಿಗಳ ವಿಚಾರಣೆ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ  ಇಂದು  ಆರಂಭಗೊಂಡಿದೆ.
 
ಜು. 2, 3, 4, 5, 6 ಮತ್ತು 16, 17, 18 ಮತ್ತು 19ರಂದು ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 167 ಸಾಕ್ಷಿಗಳ ಪೈಕಿ 44 ಮಂದಿ ಸಾಕ್ಷಿಗಳ ವಿಚಾರಣೆ ನಡೆಯಿತು.
 
ಜಿಲ್ಲಾ ಸರಕಾರಿ ಹಿರಿಯ ಅಭಿಯೋಜಕಿ ಶಾಂತಿಬಾಯಿ ಮೊದಲ ದಿನದ ವಾದದಲ್ಲಿ ಜು. ೨ ಪ್ರಕರಣದ ಪ್ರಮುಖ ಸಾಕ್ಷಿ ಹಾಗೂ ದೂರುದಾರರಾದ ಮೃತ ಭಾಸ್ಕರ್ ಶೆಟ್ಟಿಯ ತಾಯಿ ಗುಲಾಬಿ ಶೆಡ್ತಿ ಅವರ ಹೇಳಿಕೆ ಪಡೆದುಕೊಂಡಿದ್ದಾರೆ.
 
ಪ್ರಕರಣದ ಲ್ಲಿ ಬಂಧಿತರಾಗಿರುವ ಭಾಸ್ಕರ್ ಶೆಟ್ಟಿಯ ಪತ್ನಿ ರಾಜೇಶ್ವರಿ ಶೆಟ್ಟಿ(50), ಮಗ ನವನೀತ್ ಶೆಟ್ಟಿ(20) ಹಾಗೂ ನಂದಳಿಕೆಯ ನಿರಂಜನ್ ಭಟ್(26) ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
 
ವಿಚಾರಣೆ ವೇಳೆ ಇವರನ್ನು ಕರೆದು ತರುವ ಸಾಧ್ಯತೆ ಇಲ್ಲದ ಕಾರಣ  ವಿಡಿಯೋ ಕಾನ್ಫೆರೆನ್ಸ್ ಮೂಲಕ ವಿಚಾರಣೆ ನಡೆಸಲಾಯಿತು
 
ಸಾಕ್ಷನಾಶ ಆರೋಪಿಗಳಾಗಿರುವ ಶ್ರೀನಿವಾಸ ಭಟ್(56) ಹಾಗೂ ಕಾರು ಚಾಲಕ ರಾಘವೇಂದ್ರ(26) ನ್ಯಾಯಾಲಯಕ್ಕೆ ಹಾಜರಾಗಿದ್ದರು. ಪ್ರಕರಣದ ವಿಚಾರಣೆಯ ಸಂದರ್ಭ ಕೋರ್ಟ್ನ ಅವರಣದ ಹೊರಗೂ ಒಳಗೂ ಬಾರೀ ಪೋಲಿಸ್ ಬಿಗಿ ಭದ್ರತೆ ಒದಗಿಸಲಾಗಿತ್ತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments