Daily Horoscope
✕

ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ : ಸಾಕ್ಷಿಗಳ ವಿಚಾರಣೆ

Webdunia
ಮಂಗಳವಾರ, 24 ಜುಲೈ 2018 (14:05 IST)
ಉಡುಪಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳ ವಿಚಾರಣೆ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಆ.13ರಿಂದ ಮತ್ತೆ ಆರಂಭಗೊಳ್ಳಲಿದೆ.

ಪ್ರಕರಣದ ವಿಚಾರಣೆ ಆರಂಭಕ್ಕೆ ದಿನ ನಿಗದಿ ಪಡಿಸಿರುವ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವೆಂಕಟೇಶ್ ನಾಯ್ಕಾ, ಆ.13, 14, 16 ಹಾಗೂ 18 ರಂದು ಒಟ್ಟು 17 ಸಾಕ್ಷಿಗಳು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡುವಂತೆ ಆದೇಶ ನೀಡಿದ್ದಾರೆ. ಸಾಕ್ಷಿಗಳ ವಿಚಾರಣೆಯನ್ನು ವಿಶೇಷ ಸರಕಾರಿ ಅಭಿಯೋಜಕ ಶಾಂತರಾಮ್ ಶೆಟ್ಟಿ ಹಾಗೂ ಆರೋಪಿಗಳ ಪರ ವಕೀಲ ನಾರಾಯಣ ಪೂಜಾರಿ, ಅರುಣ್ ಬಂಗೇರ, ವಿಕ್ರಂ ಹೆಗ್ಡೆ ನಡೆಸಲಿದ್ದಾರೆ.

ಪ್ರಕರಣದ ಒಟ್ಟು 167 ಸಾಕ್ಷಿಗಳ ಪೈಕಿ ಈ ಹಿಂದೆ 44 ಸಾಕ್ಷಿಗಳನ್ನು ಗುರುತಿಸಿ ಸಮನ್ಸ್ ಜಾರಿ ಮಾಡಲಾಗಿತ್ತು. ಇದರಲ್ಲಿ ಪ್ರಮುಖ ಸಾಕ್ಷಿಗಳಾದ ಗುಲಾಬಿ ಶೆಡ್ತಿ, ಪೊಲೀಸ್ ಅಧಿಕಾರಿ ಎಸ್. ವಿ.ಗಿರೀಶ್ ಸೇರಿದಂತೆ ಒಟ್ಟು 11ಮಂದಿ ಸಾಕ್ಷಿಗಳನ್ನು ಎರಡು ಹಂತವಾಗಿ ವಿಚಾರಣೆ ಮಾಡಲಾಗಿತ್ತು.

ಹಿಂದಿನ ಕೊನೆಯ ವಿಚಾರಣೆಯ ದಿನವಾದ ಜು.19ರಂದು ಉಡುಪಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಆರೋಪಿಗಳಾದ ರಾಜೇಶ್ವರಿ ಶೆಟ್ಟಿ, ನವನೀತ್ ಶೆಟ್ಟಿ ಹಾಗೂ ನಿರಂಜನ್ ಭಟ್ ಅವರನ್ನು ಬಳಿಕ ಬಿಗಿ ಭದ್ರತೆಯಲ್ಲಿ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿಗೆ ಕರೆದುಕೊಂಡು ಹೋಗಲಾಗಿತ್ತು. ಆ.13ರಿಂದ ಆರಂಭವಾಗುವ ವಿಚಾರಣೆಗೆ ಈ ಮೂವರು ಆರೋಪಿಗಳನ್ನು ಪೊಲೀಸರು ಮತ್ತೆ ಬೆಂಗಳೂರು ಜೈಲಿನಿಂದ  ಉಡುಪಿಗೆ ಕರೆದುಕೊಂಡು ಬಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ. ವಿಚಾರಣೆ ಮುಗಿಯುವ ವರೆಗೆ ಆರೋಪಿಗಳು ಹಿಂದಿನಂತೆ ಮಂಗಳೂರು ಜೈಲಿನಲ್ಲಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ವಿಜಯೇಂದ್ರ ಸವಾಲು

ಮಂಡ್ಯದಲ್ಲಿ ದಿಢೀರ್ ಬಸ್ ಅಡ್ಡಗಟ್ಟಿ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ ಯುವಕ Video

ಆಭರಣ ಪ್ರಿಯರಿಗೆ ಮಹತ್ವದ ಮಾಹಿತಿ: ಬೆಂಗಳೂರು ಮತ್ತು ಕರ್ನಾಟಕದಲ್ಲಿ ಇಂದಿನ ಚಿನ್ನ ಹಾಗೂ ಬೆಳ್ಳಿ ದರ

20 ನಿಮಿಷ ಚರಂಡಿಯಲ್ಲಿ ಒದ್ದಾಡಿದರೂ ರಕ್ಷಣೆಗೆ ಬಾರದ ಜನ; ಸಿಸಿಟಿವಿಯಲ್ಲಿ ಸೆರೆಯಾಯಿತು ಭೀಕರ ಸಾವಿನ ದೃಶ್ಯ Video

ಎಲ್ರೂ ದಾಟಿದ್ರಾ… ತನ್ನವರ ಬಳಗದ ಮೇಲೆ ಆನೆಗೆ ಎಂಥಾ ಪ್ರೀತಿ..: ವೈರಲ್ Video

ಮುಂದಿನ ಸುದ್ದಿ
Show comments